ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.
ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ ಬಿಎಸ್ ಯಡಿಯೂರಪ್ಪ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ.
ನಿಯೋಜಿತ ಸಿಎಂ ನಿರ್ಗಮಿತ ಮುಖ್ಯಮಂತ್ರಿಯ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ.
ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ಆರಂಭವಾಗಿದೆ. ನೂತನ ಸಿಎಂ ಆಗಿ ಬೊಮ್ಮಾಯಿ ಘೋಷಣೆ ಮಾಡಿರುವ ಕಾರಣ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ನಡೆದಿದೆ. ಬಸವರಾಜ ಬೊಮ್ಮಾಯಿ ಭಾವಚಿತ್ರ ಹಿಡಿದು, ಬೆಂಬಲಿಗರು ನೂತನ ಮುಖ್ಯಮಂತ್ರಿಗೆ ಜೈಕಾರ ಕೂಗಿದ್ದಾರೆ.
ಇದೀಗ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ರಾಜಭವನಕ್ಕೆ ತೆರಳಿದ್ದಾರೆ. ಐವರು ನಾಯಕರೊಂದಿಗೆ ಬೊಮ್ಮಾಯಿ ರಾಜಭವನಕ್ಕೆ ತೆರಳಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.