w
Headlines
Home » ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:

ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:

ಚಾಮರಾಜನಗರ: ಬಿ.ಎಸ್​.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದಿದ್ದಾರೆ.




ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.