ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಪಂಚಾಯತಿ ಕ್ಷೇತ್ರವಾದ ರಿಪ್ಪನ್ ಪೇಟೆಯಿಂದ ಈ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಆಸಕ್ತಿಯನ್ನು ಹೊಂದಿದ್ದೇನೆ ಎಂದು ಸಮಾಜ ಸೇವಕ ಹಾಗೂ ರಿಪ್ಪನ್ ಪೇಟೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸತೀಶ್ ಹೇಳಿದ್ದಾರೆ.
ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿದ್ದು ನಾನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು ಬಿಜೆಪಿ ಪಕ್ಷದಿಂದ ಅವಕಾಶವನ್ನು ಕೊಟ್ಟರೆ ಖಂಡಿತವಾಗಿಯೂ ನಾನು ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯಿತಿಯಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
ಕಳೆದ ಕೆಲವು ದಶಕಗಳಿಂದ ರಿಪ್ಪನಪೇಟೆ ಸೇರಿದಂತೆ ತಾಲ್ಲೂಕು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನಾನು ಈ ಬಾರಿಯ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿದ್ದು ಈಗಾಗಲೇ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹಾಗೂ ಹಾಗೂ ಜಿಲ್ಲೆಯ ಮತ್ತು ತಾಲೂಕಿನ ಎಲ್ಲಾ ಬಿಜೆಪಿಯ ಮುಖಂಡರುಗಳಿಗೆ ನನ್ನ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದು ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಅವಕಾಶ ಮಾಡಿಕೊಟ್ಟರೆ ನಾನು ಖಂಡಿತವಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.
ಹೊಸನಗರ ತಾಲೂಕಿನ 4 ಜಿಲ್ಲಾಪಂಚಾಯಿತಿ ಕ್ಷೇತ್ರಗಳಲ್ಲಿ ರಿಪ್ಪನಪೇಟೆ ಸಾಮಾನ್ಯ ಕ್ಷೇತ್ರವಾಗಿದ್ದು ಬಿಜೆಪಿಯಿಂದ ಆಲುವಳ್ಳಿ ವೀರೇಶ್, ಬೆಳ್ಳೂರು ತಿಮ್ಮಪ್ಪ, ಪೆಟ್ರೋಲ್ ಬಂಕ್ ಗಿರೀಶ್, ಶಾಸಕ ಹರತಾಳು ಹಾಲಪ್ಪ ಅವರ ಸಹೋದರ ಹರತಾಳು ರಾಮಚಂದ್ರಪ್ಪ, ಉದ್ಯಮಿ ಗುಳಗುಳಿ ಶಂಕರ ನಾಗರಾಜಶೆಟ್ಟಿ ಸೇರಿದಂತೆ ಐದಕ್ಕೂ ಅಧಿಕ ಜನರು ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷೆಯನ್ನು ಹೊಂದಿದ್ದಾರೆ.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಇದುವರೆಗೂ ರಿಪ್ಪನ್ ಪೇಟೆಯ ಯಾವ ಒಬ್ಬ ವ್ಯಕ್ತಿಗೆ ಯಾವುದೇ ರಾಷ್ಟ್ರೀಯ ಪಕ್ಷಗಳಿಂದ ಅವಕಾಶ ದೊರೆತಿಲ್ಲ. ಈ ಬಾರಿಯಾದರೂ ರಿಪ್ಪನ್ ಪೇಟೆಯ ವ್ಯಕ್ತಿಯೊಬ್ಬರಿಗೆ ಅವಕಾಶ ದೊರಕಬಹುದೇ ಎಂದು ಪಟ್ಟಣದ ಜನತೆ ಆಶಾಭಾವನೆಯನ್ನು ಹೊಂದಿದ್ದಾರೆ.
ವರದಿ : ಸಬಾಸ್ಟಿನ್ ಮ್ಯಾಥ್ಯೂಸ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..