ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:

 

ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ರಾಜ್ಯ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಧಾನ ಸೌಧದಲ್ಲಿಂದೂ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು ತಮ್ಮ ರಾಜಕೀಯ ಏಳು – ಬೀಳುಗಳನ್ನು ಹೇಳುವಾಗ ಭಾವುಕರಾದರು.

ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ. ಮುಂದೆಯೇ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಅವರ ನಿರೀಕ್ಷೆಯಂತೆ ಕೆಲಸ ಮಾಡೋಣ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದರು.

ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ಹೋಗಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಕರ್ನಾಕದ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್ ಯಡಿಯೂರಪ್ಪನವರು ಒಮ್ಮೆಯೂ ಪೂರ್ಣಾವಧಿಯಾಗಿ ಅಧಿಕಾರಿ ನಿರ್ವಹಿಸಲು ಸಾಧ್ಯವಾಗಿಲ್ಲ. ಇಂದಿಗೆ ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷವಾಗಿತ್ತು. ಸಂಭ್ರಮಾಚರಣೆಯ ದಿನವೇ ಅವರು ರಾಜೀನಾಮೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *