w
Headlines
Home » ರಿಪ್ಪನ್ ಪೇಟೆ: ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ಪ್ರತಿಭಟನೆ

ರಿಪ್ಪನ್ ಪೇಟೆ: ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ಪ್ರತಿಭಟನೆ

ರಿಪ್ಪನ್ ಪೇಟೆ: ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬುಧವಾರ ಬೆಳಗ್ಗೆ 10:00 ಗಂಟೆ ಗೆ ಸರಿಯಾಗಿ ಬಿಜೆಪಿ ಪಕ್ಷದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಪ್ಪನ್ ಪೇಟೆ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಪಂ ಸದಸ್ಯರಾದ ಆಸೀಪ್ ಬಾಷಾಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಕ್ಕಳು ಹಾಗೂ ಬಾಣಂತಿಯರಿಗೆ ಹಂಚುವ ಮೊಟ್ಟೆಯಲ್ಲಿ ಭಾರಿ ಹಗರಣ ನಡೆಸಿರುವ ಶಶಿಕಲಾ ಜೊಲ್ಲೆ ತಮ್ಮ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರ ವಿರುದ್ಧ ಪ್ರತಿಭಟನೆ ಮತ್ತು ಸರ್ಕಾರಕ್ಕೆ ಮನವಿ ನೀಡಲಾಗುವುದು,ಈ ಪ್ರತಿಭಟನೆಯು ರಿಪ್ಪನ್ ಪೇಟೆ ವಿನಾಯಕ ವೃತ್ತ ದಿಂದ ನಾಡಕಛೇರಿಯವರೆಗೂ ಹಮ್ಮಿಕೊಳ್ಳಲಾಗಿದೆ.

 ಈ ಪ್ರತಿಭಟನೆ ಯಲ್ಲಿ ಮಾಜಿ ಶಾಸಕರದ ಸನ್ಮಾನ್ಯ ಗೋಪಾಲ ಕೃಷ್ಣ ಬೇಳೂರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಲಗೋಡ ರತ್ನಕರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಲಿ ಎಪಿಎಂಸಿ ಸದಸ್ಯರಾದ ಬಂಡಿ ರಾಮಚಂದ್ರ ರವರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ವೇತಾ ಬಂಡಿ,ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್, ಎಪಿಎಂಸಿ ಸದಸ್ಯರಾದ ಈಶ್ವರಪ್ಪ ಗೌಡ್ರು,ಕೆಂಚನಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಬೆದುಲ್ಲಾ ಷರೀಫ್, ಅರಸಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮಾಕರ್, ರಿಪ್ಪನಪೇಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಾಲಕ್ಷ್ಮಿ ಅಣ್ಣಪ್ಪ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರು ಹಾಲಿ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರೇಶ್, ಮಧುಸೂದನ್, ಹಾಗೂ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು ಇನ್ನಿತರ ಮುಖಂಡರು ಪಾಲ್ಗೊಳ್ಳುತ್ತಾರೆ ಎಂದರು.


ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.