ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಸಾರ್ವಜನಿಕರ ಆಗ್ರಹ :

ಹೊಸನಗರ : ಯಡೂರು ಸುಳುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ಡಾಕ್ಟರ್ ಇಲ್ಲ ನಮಗೆ ಡಾಕ್ಟರ್ ಬೇಕು ಎಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿ ಸದ್ಯ ಆರ್ಯುವೇದ ಬಗ್ಗೆ ತಿಳಿದಿರುವ ಡಾಕ್ಟರ್ ಇದ್ದು ನಮಗೆ  ಇಂಗ್ಲಿಷ್ ಮೆಡಿಸನ್ ಕೋಡುವ ಡಾಕ್ಟರ್ ಬೇಕು. ತೀರ್ಥಹಳ್ಳಿ ಅಥವಾ ಹೊಸನಗರಕ್ಕೆ ಆರೋಗ್ಯ ಸರಿ ಇಲ್ಲ ಎಂದು ಹೋಗುವುದಾದರೆ  30 ಕ್ಕು ಹೆಚ್ಚು ಕಿಲೋಮೀಟರ್ ಅಗುತ್ತದೆ. ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾರದ 24…

Read More

ಹುಂಚಾ : ಗೃಹಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಲ್ಲದವರ ಮೇಲೆ ಉಳ್ಳವರ ದರ್ಬಾರ್ : ಬಡ ವೃದ್ದೆಯ ಮೇಲೆ ದಬ್ಬಾಳಿಕೆ

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಸರ್ವೇ ನಂಬರ್ 37 ರಲ್ಲಿ ಜಮೀನಿನ ಖಾತೆದಾರನಿಗೆ ಹಕ್ಕು ಪತ್ರ ನೀಡಲಾಗಿದ್ದರೂ ಕೂಡಾ ಸದರಿ ಜಾಗದ ಪಕ್ಕದ ರೈತನೋರ್ವ ದುರುದ್ದೇಶದಿಂದ ಅಧಿಕಾರಿಗಳನ್ನು ಬಳಸಿಕೊಂಡು ಓಡಾಟಕ್ಕೆ ಜಾಗ ಬಿಡುವಂತೆ ಒತ್ತಾಯಿಸಿ ತೆರವುಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸದರಿ ಗ್ರಾಮದ ಸರಿಯಾಗಿ ಕಣ್ಣು ಕಾಣಿಸದ ಮತ್ತು ಕಿವಿ ಕೇಳಿಸದ ಸುಮಾರು 75 ವರ್ಷದ ವೃದ್ಧೆ ಗೌರಮ್ಮ ಕೋಂ ಡಾಕಪ್ಪ ಎಂಬುವರಿಗೆ ಸರ್ವೇ ನಂಬರ್ 37 ರಲ್ಲಿ ಒಂದು…

Read More

ಪ್ರಿಯಕರನಿಂದ ಪ್ರೇಯಸಿಗೆ ಚೂರಿ ಇರಿತ : ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ : ಪ್ರೇಮಿಗಳು ಇಬ್ಬರು ಗಂಭೀರ…!

ಉಡುಪಿ : ನಗರದ ಅಂಬಾಗಿಲು ಸಂತೆಕಟ್ಟೆ ಪೆಟ್ರೋಲ್ ಪಂಪ್ ಬಳಿ ಯುವಕನೋರ್ವ ತನ್ನ ಪ್ರೇಯಸಿಗೆ ಚೂರಿ ಇರಿದು ನಂತರ ತಾನೂ ಚೂರಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವ ಜೋಡಿಗಳು ಬೈಕಿನಲ್ಲಿ ಬಂದು ನಂತರ ಜಗಳವಾಡಿ ಚೂರಿಯಲ್ಲಿ ಇರಿದು ಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯು ಸ್ಥಳೀಯ ಅಂಬಾಗಿಲು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಎಂದು ತಿಳಿಯಲಾಗಿದೆ.ಯುವಕನು ಘಟನಾ ಸ್ಥಳಕ್ಕೆ ಬಂದ ಬೈಕ್ ಐಡಿಯಲ್ ಮೆಡಿಕಲ್ ರೇಫ್ ನದ್ದು ಎಂದು ತಿಳಿದು ಬಂದಿದೆ,ಯವಕನ ವಿವರಗಳು ಇನ್ನಷ್ಟು ತಿಳಿದುಬರಬೇಕಿದೆ….

Read More

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ

ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು…

Read More

ರಿಪ್ಪನ್ ಪೇಟೆ : ನೂತನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅನುದಾನ ಬಿಡುಗಡೆ:ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ಪಟ್ಟಣದ ಬಹುದಿನಗಳ ಬೇಡಿಕೆಯಾಗಿದ್ದ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದ ನೂತನ ಕಟ್ಟಡಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸುಮಾರು ನಾಲ್ಕು ಕೋಟಿ ಇಪ್ಪತ್ತಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕರಾದ ಹರತಾಳು ಹಾಲಪ್ಪ ಇಂದಿಲ್ಲಿ ತಿಳಿಸಿದರು. ರಿಪ್ಪನ್ ಪೇಟೆ ಯಲ್ಲಿರುವ ಪ್ರಸ್ತುತ ಬಾಲಕರ ವಸತಿ ನಿಲಯವು ಶಿಥಿಲ ಅವಸ್ಥೆಯಲ್ಲಿರುವುದರಿಂದ ಬಹುದಿನದ ಬೇಡಿಕೆಯಾಗಿದ್ದ ವಸತಿ ನಿಲಯದ ಕಟ್ಟಡಕ್ಕೆ ಅನುಮೋದನೆ ಸಿಕ್ಕಿರುವುದರಿಂದ ಹರತಾಳು ಹಾಲಪ್ಪ ನವರು ಸ್ಥಳಕ್ಕೆ ಭೇಟಿ ನೀಡಿ ಕಟ್ಟಡದ…

Read More

ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು.  ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ…

Read More

ಶಿವಮೊಗ್ಗ: ಭೂಗಳ್ಳ ಅಧಿಕಾರಿಗಳು ಹಾಗು ಭ್ರಷ್ಟ ರಾಜಕಾರಣಿಗಳನ್ನು ಜೈಲಿಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ:

  ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.  ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ…

Read More

ತೀರ್ಥಹಳ್ಳಿ:: ಸಂಘ ಪರಿವಾರದಿಂದ ಯಶಸ್ವಿ ರಕ್ತದಾನ ಶಿಬಿರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಸಂಘ ಪರಿವಾರಗಳು ತೀರ್ಥಹಳ್ಳಿ ಇವರು ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ತೀರ್ಥಹಳ್ಳಿಯ ರೋಟರಿ ರಕ್ತನಿಧಿಯಲ್ಲಿ ಇಂದು ನಡೆಯಿತು. ಸಂಘ ಪರಿವಾರದ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ  ರೋಟರಿ ರಕ್ತನಿಧಿ ತೀರ್ಥಹಳ್ಳಿಯ ಟೆಕ್ನೀಶಿಯನ್ ಅರುಣ್ ಕೆರೋಡಿ  ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ “ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದರೆ ಸೇವೆ, ಸಂಘದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ದಿನವನ್ನು ಸೇವೆಗೆ ಮುಡಿಪಾಗಿಡುತ್ತಾರೆ ಅದರಲ್ಲಿ ಸ್ವಚ್ಚತಾ…

Read More

ಹೆದ್ದಾರಿಪುರ: ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಆರಗ ಜ್ಞಾನೇಂದ್ರ

ಹೆದ್ದಾರಿಪುರ : ಕರ್ನಾಟಕ ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ ರವರು ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ಹೆದ್ದಾರಿಪುರ ಬೂತ್ ನ ಅಧ್ಯಕ್ಷರಾದ ಸತೀಶ್ ಭಟ್ ರವರಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡುವ ಮೂಲಕ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪಲಕ ಅನಾವರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ ಸಂಗತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೊತೆಗೆ ಪಕ್ಷದ ಸಂಪರ್ಕವನ್ನು…

Read More

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…

Read More