ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.


ಶಾಲಾ-ಕಾಲೇಜು ಆರಂಭ:

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಶಾಲಾ ಕಾಲೇಜುಗಳನ್ನ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಮೊದಲ ಹಂತದಲ್ಲಿ ಆಗಸ್ಟ್ 23 ರಿಂದ 9,10,11,12ನೇ ತರಗತಿಯನ್ನ ಆರಂಭಿಸಲಾಗುತ್ತದೆ. ಬ್ಯಾಚ್ ವೈಸ್ ತರಗತಿ ನಡೆಸಲಾಗುತ್ತದೆ. ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ತಜ್ಞರ ಸಮಿತಿ ಜತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *