Categories: Blog

ಅವ್ಯವಸ್ಥೆಯ ಆಗರ,ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಾದ ರಿಪ್ಪನ್ ಪೇಟೆ ಬಸ್ ಪ್ರಯಾಣಿಕರ ತಂಗುದಾಣ !!

ರಿಪ್ಪನ್ ಪೇಟೆ : ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮ ಪಂಚಾಯತ್, ಸ್ವಚ್ಚ ಭಾರತ್ ಅಭಿಯಾನದಲ್ಲಿ ಪ್ರಶಸ್ತಿ ಪಡೆದ ಪಂಚಾಯತಿ,ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ರಿಪ್ಪನ್ ಪೇಟೆ ಯಲ್ಲಿರುವ ಒಂದೇ ಒಂದು ಪ್ರಯಾಣಿಕರ ತಂಗುದಾಣ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದೆ.
ರಿಪ್ಪನ್ ಪೇಟೆ ಜನತೆಯ ದಶಕದ ಬೇಡಿಕೆ ಬಸ್ ನಿಲ್ದಾಣ ರಾಜಕಾರಣಿ ಗಳ ಇಚ್ಚ ಶಕ್ತಿ ಕೊರತೆಯಿಂದ ಆಗದೆ ರಾಜಕಾರಣಿ ಗಳಿಗೆ ತಮ್ಮ ಎಲೆಕ್ಷನ್ ಸಮಯದ ಪ್ರಚಾರದ ಅಸ್ತ್ರಕ್ಕೆ ಸೀಮಿತ ವಾಗಿದೆ. ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಇರುವ ಈ ಹೋಬಳಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತ ಬಸ್ ನಿಲ್ದಾಣ ಇಲ್ಲದಿರುವುದು ನಾಚಿಕೆಯ ಸಂಗತಿಯಾಗಿದೆ.
ಇನ್ನು ಪ್ರಸ್ತುತ ಇರುವ ಪ್ರಯಾಣಿಕರ ತಂಗುದಾಣದ ಸ್ಥಿತಿಯಂತೂ ಶೋಚನೀಯವಾಗಿದೆ. ಎಲೆಂದರಲ್ಲಿ ಬಟ್ಟೆಬರೆಗಳು, ಬಿಕ್ಷುಕರು,  ಮದ್ಯವ್ಯಸನಿಗಳು, ಅನಾಥರು,ನಿಲ್ದಾಣದಲ್ಲಿ ಎಲ್ಲೆಂದರಲ್ಲಿ  ಮಲಗಿರುತ್ತಾರೆ. ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿನಿಯರು,ವೃದ್ಧರು,ಮಹಿಳೆಯರು,ಹಿರಿಯ ನಾಗರಿಕರು ಕಾಯುತ್ತಿರುತ್ತಾರೆ. ಆದರೆ ಇಲ್ಲಿ ಒಂದು ನಿಮಿಷಕ್ಕಿಂತ ಹೆಚ್ಚು ಕಾಯುವ ಸ್ಥಿತಿ ಇಲ್ಲಿಲ್ಲ.!!
ಎಲ್ಲೆಂದರಲ್ಲಿ ಬಿದ್ದಿರುವ ಕಸದರಾಶಿ, ಗಲೀಜು ವಸ್ತುಗಳು, ಗಬ್ಬುನಾರುತ್ತಿದೆ.ಸ್ವಚ್ಛ ಭಾರತ ಅಭಿಯಾನದಲ್ಲಿ ಪ್ರಶಸ್ತಿ ಪಡೆದಿರುವ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗು ಜನಪ್ರತಿನಿಧಿಗಳು ಪ್ರಯಾಣಿಕರ ತಂಗುದಾಣವನ್ನು ಗಮನಿಸದೆ ಇರುವುದು ದುರಂತವೇ ಸರಿ !
ಈ ಬಸ್ ಪ್ರಯಾಣಿಕರ ತಂಗುದಾಣ ಕ್ಕೆ ಈ ಹಿಂದೆ  ಸೂಕ್ತವಾದಂತಹ ವಿದ್ಯುತ್ ಸಂಪರ್ಕ ವ್ಯವಸ್ಥೆ ಇತ್ತು .ಈಗ ವಿದ್ಯುತ್ ಸಂಪರ್ಕವೂ ಸಹ ಇಲ್ಲದಂತಾಗಿದೆ. ರಾತ್ರಿ ಹೊತ್ತಿನಲ್ಲಿ ಬಸ್ ನಿಲ್ದಾಣದಲ್ಲಿ ಅನೈತಿಕ ಚಟುವಟಿಕೆಗೆ ಹೇಳಿಮಾಡಿಸಿದ ಜಾಗ ಎನ್ನುವಂತಾಗಿದೆ.
ಈ ಬಗ್ಗೆ ಸ್ಥಳೀಯ ಗ್ರಾಮಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು,ಜನಪ್ರತಿನಿಧಿಗಳು ಗಮನಹರಿಸಿದರೆ ಒಳ್ಳೆಯದು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ವರದಿ : ರಾಮನಾಥ್ ರಿಪ್ಪನ್ ಪೇಟೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

2 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

8 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago