ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ದೊರೆತಿದ್ದು ಇಂದು ಮಧ್ಯಾಹ್ನ 2.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ವಿಷಯವನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳುವಾಗ ಜ್ಞಾನೇಂದ್ರ ರವರು ತುಂಬಾ ಭಾವುಕರಾಗಿದ್ದರು.ಸಚಿವ ಸ್ಥಾನಕ್ಕಾಗಿ ಯಾವುದೇ ಲಾಭಿ ಮಾಡದ ಜನನಾಯಕನಿಗೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ.
ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರರವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿಯಲ್ಲಿ ಬಿಜೆಪಿ ನೆಲೆಯೂರಲು ಭದ್ರಬುನಾದಿ ಕಲ್ಪಿಸಿದ್ದರು.
ಜ್ಞಾನೇಂದ್ರರಿಗೆ ಸಚಿವ ಸ್ಥಾನ ದೊರೆತಿರುವುದರಿಂದ ತೀರ್ಥಹಳ್ಳಿ ಭಾಗದ ಜನತೆಯ ಬಹುದಿನದ ಕನಸು ಈಡೇರಿದಂತಾಗಿದೆ.
ಕಳೆದ ಬಾರಿ ಮಂತ್ರಿ ಸ್ಥಾನದ ಅವಕಾಶ ವಂಚಿತರಾಗಿದ್ದ ಜ್ಞಾನೇಂದ್ರರಿಗೆ ಈ ಬಾರಿ ಅವಕಾಶ ದೊರೆತಿರುವುದು ಅವರ ಬೆಂಬಲಿಗರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಸಂತಸ ಮೂಡಿಸಿದೆ.
ತಮ್ಮ ನೆಚ್ಚಿನ ನಾಯಕನಿಗೆ ಕ್ಯಾಬಿನೆಟ್ ಸಚಿವ ಸ್ಥಾನ ದೊರೆತಿರುವುದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ತೀರ್ಥಹಳ್ಳಿ ತಾಲೂಕಿನಾದ್ಯಂತ ವಿಜಯೋತ್ಸವ ಆಚರಿಸಲು ಸಿದ್ದತೆ ನಡೆಸಿದ್ದಾರೆ.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್