Categories: Blog

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಕಾಲದ ಮಾಹಿತಿಯ ಫಲಕ ಕಾಣೆ :

ಹೊಸನಗರ: ಇಲ್ಲಿನ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಜನರಿಗೆ ಮಾಹಿತಿ ನೀಡುವ ಸಕಾಲ ದ ಫಲಕ ಕಾಣೆಯಾಗಿದೆ.

ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕಾಲ ದ ಫಲಕ ಹಾಕುವುದು ಕಡ್ಡಾಯವಾಗಿದೆ ಆದರೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಹೊಸ ಕಟ್ಟಡಕ್ಕೆ ಕಛೇರಿ ವರ್ಗಗೊಂಡಿದ್ದು ಹಳೆ ಪಂಚಾಯಿತಿಯನ್ನು ಸ್ವಚ್ಚ ಸಂಕೀರ್ಣ ಅಡಿಯಲ್ಲಿ ಸಿದ್ದಪಡಿಸಿದ್ದಾರೆ.
ಆದರೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹಾಕುವ ಸಕಾಲ ಫಲಕ ಇನ್ನೂ ಸ್ವಚ್ಚ ಸಂಕೀರ್ಣ ಕಟ್ಟಡದಲ್ಲಿ ಕೊಳೆಯುತ್ತಿದೆ.

ಈ ಬಗ್ಗೆ ಮಾದ್ಯಮ ಪ್ರತಿನಿಧಿಗಳು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅವರು ಕೆಂಡಾಮಂಡಲರಾಗಿ ಸರಕಾರಿ ಆದೇಶಕ್ಕೂ ತಮಗೂ ಸಂಬಂಧವಿಲ್ಲದಂತೆ ವರ್ತಿಸುತಿದ್ದಾರೆ.

.       ಸ್ವಚ್ಚ ಸಂಕೀರ್ಣ ಕಟ್ಟಡದಲ್ಲಿ ಕೊಳೆಯುತ್ತಿರುವ ಸಕಾಲ ಫಲಕ



ಒಟ್ಟಾರೆಯಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅಳವಡಿಸುವ ಸಕಾಲ ಫಲಕವನ್ನು ಸಂಬಂಧಪಟ್ಟ ಅಧಿಕಾರಿಗಳು ಹೊಸ ಗ್ರಾಮ ಪಂಚಾಯತಿಯಲ್ಲಿ ಅಳವಡಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದು ಗ್ರಾಮಸ್ಥರ ಆಗ್ರಹ.



ವರದಿ: ದೇವರಾಜ್ ರಿಪ್ಪನ್ ಪೇಟೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

4 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

12 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

13 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago