Categories: Blog

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸಂತಾಪ:

ಶ್ರೀ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ವಂಶಪಾರಂಪರ್ಯವಾಗಿ ಅರ್ಚಕರಾಗಿದ್ದ ಅರ್ಚಕ್ ದತ್ತಾತ್ರೇಯ ಭಟ್ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ದೇವಸ್ಥಾನದಲ್ಲೂ ಭಕ್ತರೊಂದಿಗೆ ಸಹನೆಯಿಂದ ವರ್ತಿಸುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಶ್ರೀ ರೇಣುಕಾಂಬ ದಸರಾ ಉತ್ಸವ ಆಚರಣಾ ಸಮಿತಿ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ ಮತ್ತು ಪದಾಧಿಕಾರಿಗಳು, ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ ಹಾಗೂ ಆಡಳಿತ ಮಂಡಳಿಯವರು ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಸಂತಾಪ ಸೂಚಿಸಿದ್ದಾರೆ.



ವರದಿ : ವೆಂಕಟೇಶ್ ಚಂದ್ರಗುತ್ತಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

10 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

16 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

2 days ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

2 days ago