Categories: Blog

ದಾವಣಗೆರೆ: ಕಾಂಗ್ರೆಸ್‌ ಮುಖಂಡನ ಭೀಕರ ಹತ್ಯೆ:ನಾಲ್ವರ ಬಂಧನ

ದಾವಣಗೆರೆ: ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಇಲ್ಲಿನ ಬಸವರಾಜಪೇಟೆ ನಿವಾಸಿ ಸೀಮೆಎಣ್ಣೆ ಪರಮೇಶ್(43) ತಮ್ಮ ಮನೆ ಪಕ್ಕದ ಬೀದಿ ಹುಬ್ಬಳ್ಳಿ ಚೌಡಪ್ಪ ಗಲ್ಲಿಯಲ್ಲಿರುವ ಪರಿಚಿತರ ಮನೆಗೆ ಹೋಗಿ ಬರುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಪರಮೇಶ್‍ಗೆ ಹೊಡೆದು ಕೆಳಗೆ ಬೀಳಿಸಿದ್ದಾರೆ. ನಂತರ ಪರಮೇಶ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಪರಮೇಶ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು.

ಈ ಹಿಂದೆ ದೇವಸ್ಥಾನದ ಪಟ್ಟಿ ಕೇಳುವ ವಿಚಾರವಾಗಿ ಗಲಾಟೆ ನಡೆದಿತ್ತು. ಆಗ ಪರಮೇಶ್ ಗಲಾಟೆ ಬಗ್ಗೆ ಪಂಚಾಯತಿ ಮಾಡಿ ಬಗೆಹರಿಸಿದ್ದ. ಆದರೆ, ರಾಜೀ ಪಂಚಾಯತಿ ವೇಳೆ ತಮ್ಮ ವಿರುದ್ದ ಪಂಚಾಯತಿ ಮಾಡಲಾಗಿದೆ ಎಂದು ಕೊಲೆ ಆರೋಪಿಗಳು ಈತನ ಮೇಲೆ ದ್ವೇಷ ಸಾಧಿಸಿದ್ದರು. ಇದೇ ಸೇಡಿನ ಹಿನ್ನಲೆಯಲ್ಲಿ ನಾಲ್ವರು ಪರಮೇಶ್‌ನನ್ನು ಬುಧವಾರ ರಾತ್ರಿ ಬಸವರಾಜ ಪೇಟೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದರು.

ಪರಮೇಶ್ ಈ ಮೊದಲು ಸೀಮೆಎಣ್ಣೆ ವ್ಯಾಪಾರ ನಡೆಸುತ್ತಿದ್ದು, ಆನಂತರ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಮೊದಲು ಬಿಜೆಪಿಯಲ್ಲಿದ್ದವರು ನಂತರ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇವರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠ ಸಿ.ಬಿ.ರಿಷ್ಯಂತ್, ಎಎಸ್ಪಿ ಎಂ.ರಾಜೀವ್ ಭೇಟಿ ನೀಡಿ ಪರಿಶೀಲಿಸಿದರು.
ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಬಸವರಾಜಪೇಟೆ ನಿವಾಸಿ ಸೀಮೆಎಣ್ಣೆ ಪರಮೇಶ್ ಹತ್ಯೆ ಮಾಡಿದ್ದ ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದು,  ಹನುಮಂತ (33), ಬಸವರಾಜ್ (31)ಕುಮಾರ್ (27) , ನಯಾಜ್ (23)ಬಂಧಿತ ಆರೋಪಿಗಳಾಗಿದ್ದು, ಬಂಧಿತರು ದಾವಣಗೆರೆ ನಿವಾಸಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

7 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

7 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

13 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago