ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ.
ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಮಂತ್ರಿ ಸ್ಥಾನ ಕೊಟ್ಟರೆ ಉತ್ತಮವಾಗಿ ಕಾರ್ಯವನ್ನು ನಿರ್ವಹಿಸುತ್ತೇನೆ. ನಾನು ಹೊಸನಗರ,ಸೊರಬ,ಸಾಗರ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ವಿಜಯಶಾಲಿಯಾಗಿದ್ದೇನೆ,ಸುಮಾರು ಅರ್ಧ ಜಿಲ್ಲೆಯನ್ನು ನಾನು ಪ್ರತಿನಿಧಿಸಿದ್ದೇನೆ ಎಂದರು.
ಈ ಬಾರಿ ನನಗೆ ಮಂತ್ರಿ ಸ್ಥಾನ ಒಲಿಯುವ ಸಾಧ್ಯತೆಗಳಿವೆ ಮಾಧ್ಯಮದಲ್ಲಿ ಹಿರಿಯರಿಗಿಂತ ಕಿರಿಯರಿಗೆ ಈ ಬಾರಿ ಹೆಚ್ಚಿನ ಅವಕಾಶವನ್ನು ನೀಡುವುದಾಗಿಯೂ ತೋರಿಸುತ್ತಿರುವುದರಿಂದ ನನಗೂ ಮಂತ್ರಿ ಸ್ಥಾನ ಒಲಿಯುವ ನಿರೀಕ್ಷೆಗಳಿವೆ ಎಂದರು.
ಪಕ್ಷದ ಶಿಸ್ತಿನ ಸಿಪಾಯಿಯಾಗಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ
ಬದ್ದನಾಗಿದ್ದೇನೆ ಎಂದು ಸುದ್ದಿಗಾರರೊಂದಿಗೆ ತಿಳಿಸಿದರು.
ವರದಿ: ಪವನ್ ಕುಮಾರ್ ಕಠಾರೆ.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್