w
Headlines
Home » ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

 ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕು. ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ.

 ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಕನಸುಗಳನ್ನು ತೆರೆದಿಟ್ಟರು.
ಯಾವುದೇ ಸಚಿವ ಸಂಪುಟದಖಾತೆ ಹಂಚಿಕೆಯಲ್ಲಿ ಅಸಮಾಧಾನ ಸಹಜ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಣಾಕ್ಷರಿದ್ದಾರೆ, ಅವರು ಎಲ್ಲಾ ಗೊಂದಲಗಳನ್ನು ಬಗೆಹರಿಸುತ್ತಾರೆ. ಯಾವುದೇ ಖಾತೆಗೆ ಬೇಡಿಕೆ ಇಟ್ಟಿರಲಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು.



ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.