ತುಮಕೂರು: ಆರ್‌ಎಸ್‌ಎಸ್, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕು. ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ.
ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಕನಸುಗಳನ್ನು ತೆರೆದಿಟ್ಟರು.
ಯಾವುದೇ ಸಚಿವ ಸಂಪುಟದಖಾತೆ ಹಂಚಿಕೆಯಲ್ಲಿ ಅಸಮಾಧಾನ ಸಹಜ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಣಾಕ್ಷರಿದ್ದಾರೆ, ಅವರು ಎಲ್ಲಾ ಗೊಂದಲಗಳನ್ನು ಬಗೆಹರಿಸುತ್ತಾರೆ. ಯಾವುದೇ ಖಾತೆಗೆ ಬೇಡಿಕೆ ಇಟ್ಟಿರಲಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್