ಸಾಗರ :ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಪ್ರಕರಣಗಳ ಸಾಗುವಳಿ ಚೀಟಿಯನ್ನು ತಕ್ಷಣದಲ್ಲಿ ನೀಡುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಗರ ವತಿಯಿಂದ ಸಾಗರ ತಹಶೀಲ್ದಾರ್ ರಿಗೆ ಮನವಿಯನ್ನು ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ಮಾಜಿ ಸಚಿವರು ಮಾಜಿ ವಿಧಾನಸಭಾ ಅಧ್ಯಕ್ಷರು ಆದ ಶ್ರೀ ಕಾಗೋಡು ತಿಮ್ಮಪ್ಪನವರು ಮಾತನಾಡುತ್ತಾ ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ರೈತರ ಬಗರ್ ಹುಕುಂ ಜಮೀನು ಗಳಿಗೆ ಅರ್ಜಿ ಸಲ್ಲಿಸಿ ಸಾಕಷ್ಟು ಸಮಯ ಆದರೂ ಕೂಡ ಇದುವರೆಗೂ ಸಾಗುವಳಿ ಚೀಟಿಯನ್ನು ನೀಡಿಲ್ಲ ರೈತರು ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಆದಷ್ಟು ಬೇಗ ಸಾಗುವಳಿ ಚೀಟಿಯನ್ನು ನೀಡಬೇಕು 94ಸಿ,94ಸಿಸಿ ಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ ಆರ್ ಜಯಂತ್ ಸುರೇಶ್ ಬಾಬು ಮಲ್ಲಿಕಾರ್ಜುನ ಹಕ್ರೆ ನಗರಸಭೆ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ ರವಿ ಲಿಂಗನಮಕ್ಕಿ ಇನ್ನೂ ಅನೇಕ ಮುಖಂಡರು,ಕಾರ್ಯಕರ್ತರು ಭಾಗವಹಿಸಿದ್ದರು
ವರದಿ :ಧರ್ಮರಾಜ್ ಜಿ ಸಾಗರ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್