ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು.
119 ಶಾಸಕರನ್ನು ಹೊಂದಿರುವ ಸರ್ಕಾರ ಇದಾಗಿದೆ. ಇದು ಗ್ರಾಮ ಪಂಚಾಯತ್ ಅಲ್ಲ. ಯಾರಾದರೂ ಸರ್ಕಾರ ಬೀಳುವ ಆಲೋಚನೆಯಲ್ಲಿ ಇದ್ದರೆ ಅದು ಕೇವಲ ಭ್ರಮೆ ಮಾತ್ರ. ಆ ಭ್ರಮೆಯಲ್ಲಿಯೇ ಇನ್ನೂ ಒಂದು ವರ್ಷ ದಿನ ದೂಡಬೇಕಾಗುತ್ತದೆ ಎಂದು ಟೀಕಿಸಿದರು.
ಇಂದಿನಿಂದ ಪ್ರೌಢಶಾಲೆಗಳು ಆರಂಭವಾಗಿದೆ. ಈಗಾಗಲೇ ಅನೇಕ ಶಾಲೆಗೆ ಭೇಟಿ ನೀಡಿದ್ದೇನೆ. ಮಕ್ಕಳು ಉತ್ಸಾಹದಿಂದ, ಏನೋ ಕಳೆದುಕೊಂಡಿದ್ದು ಸಿಕ್ಕಿದೆ ಎಂಬ ಆಶಯದಲ್ಲಿ ಶಾಲೆಗೆ ಬಂದಿದ್ದಾರೆ. ಪರಿಸ್ಥಿತಿ ನೋಡಿ ಉಳಿದ ಮಕ್ಕಳಿಗೂ ಶಾಲೆಗೆ ಬರಲು ಅನುಕೂಲ ಆಗುವ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್