ಭದ್ರಾವತಿ : ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿದರು.
ತಾಲೂಕಿನ ಜೀವನದಿಯಾದ ಭದ್ರಾ ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಹೇಳಿದರು.
ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮುಖಂಡರ ಸಮುಖದಲ್ಲಿ ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿ ಮಾತನಾಡಿದರು.
ನಾನು ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಪ್ರತಿ ಬಾರಿಯೂ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತಿರವುದು ನನ್ನ ಸೌಭಾಗ್ಯವಾಗಿದೆ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ಹಾಗು ಕೊನೆ ಭಾಗದ ರೈತರು ನೆಮ್ಮದಿಯಿಂದ ಬದುಕುವಂತಾಗಬೇಕು.ಇದೆ ರೀತಿ ಪ್ರತಿ ವರ್ಷವು ಜಲಾಶಯ ಭರ್ತಿಯಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಬಿಳಿಕಿ ಹಿರೇಮಠದ ಶ್ರೀ ರಾಚೋಟ್ಟೆಶ್ವರ ಶಿವಾಚಾರ್ಯ ಸ್ವಾಮಿಜಿ, ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಚಾರ್ಯ ಸ್ವಾಮೀಜಿ, ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕ ಕೃಷ್ಣಮೂರ್ತಿ ಸ್ವಾಮೀಜಿ ಸೇರಿದಂತೆ ಶಾಸಕರ ಕುಟುಂಬ ವರ್ಗ, ಸಹೋದರರಾದ ಬಿ ಕೆ ಜಗನ್ನಾಥ್, ಬಿ. ಕೆ ಮೋಹನ್,ಬಿ.ಕೆ ಶಿವಕುಮಾರ್, ಮತ್ತು ಅವರ ಮಕ್ಕಳು, ತಾಲೂಕ್ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಾಲೂಕ್ ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ತಾಲೂಕ್ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರು ಗಣ್ಯರು ಉಪಸ್ಥಿತರಿದ್ದರು.
ವರದಿ : ಈಶ್ವರ್ ಭದ್ರಾವತಿ