Categories: Blog

ಭದ್ರೆ ಪ್ರತಿ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಲಿ, ಕೊನೆಯ ಭಾಗದ ರೈತರಿಗೂ ನೀರು ತಲುಪಲಿ : ಬಿ ಕೆ ಸಂಗಮೇಶ್ವರ್

ಭದ್ರಾವತಿ : ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿದರು.

ತಾಲೂಕಿನ ಜೀವನದಿಯಾದ ಭದ್ರಾ  ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಹೇಳಿದರು.

 ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು, ಅಭಿಮಾನಿಗಳು  ಮತ್ತು ಮುಖಂಡರ ಸಮುಖದಲ್ಲಿ ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿ ಮಾತನಾಡಿದರು.

 ನಾನು ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಪ್ರತಿ ಬಾರಿಯೂ ಜಲಾಶಯ ಪೂರ್ಣ ಪ್ರಮಾಣದಲ್ಲಿ  ಭರ್ತಿಯಾಗುತ್ತಿರವುದು ನನ್ನ ಸೌಭಾಗ್ಯವಾಗಿದೆ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ಹಾಗು ಕೊನೆ ಭಾಗದ ರೈತರು ನೆಮ್ಮದಿಯಿಂದ ಬದುಕುವಂತಾಗಬೇಕು.ಇದೆ ರೀತಿ ಪ್ರತಿ ವರ್ಷವು ಜಲಾಶಯ ಭರ್ತಿಯಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಬಿಳಿಕಿ ಹಿರೇಮಠದ ಶ್ರೀ ರಾಚೋಟ್ಟೆಶ್ವರ ಶಿವಾಚಾರ್ಯ ಸ್ವಾಮಿಜಿ, ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಚಾರ್ಯ ಸ್ವಾಮೀಜಿ, ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕ ಕೃಷ್ಣಮೂರ್ತಿ ಸ್ವಾಮೀಜಿ ಸೇರಿದಂತೆ ಶಾಸಕರ ಕುಟುಂಬ ವರ್ಗ, ಸಹೋದರರಾದ ಬಿ ಕೆ ಜಗನ್ನಾಥ್, ಬಿ. ಕೆ ಮೋಹನ್,ಬಿ.ಕೆ ಶಿವಕುಮಾರ್, ಮತ್ತು ಅವರ ಮಕ್ಕಳು, ತಾಲೂಕ್ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಾಲೂಕ್ ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ತಾಲೂಕ್ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರು ಗಣ್ಯರು ಉಪಸ್ಥಿತರಿದ್ದರು.



ವರದಿ : ಈಶ್ವರ್ ಭದ್ರಾವತಿ


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

6 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

7 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

8 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

9 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

11 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

11 hours ago