ರಿಪ್ಪನ್ ಪೇಟೆ:ನಾನು ನನ್ನದು ಎಂಬುದಕ್ಕಿಂತ ನಾವು ನಮ್ಮದು ಎಂಬ ಮನೋಭಾವ ಇದ್ದಾಗ ಮಾತ್ರ ಬೆಳೆಯಲಿಕ್ಕೆ ಸಾದ್ಯ ಎಂದು ಮಳಲಿಮಠದ .ಡಾ.ಶ್ರೀ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಬುಧವಾರ ಹೊಸನಗರ ತಾಲೂಕಿನ ಮಸರೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ. ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡ. ವಿಶೇಷ ರುದ್ರಾಭಿಷೇಕ ಪೂಜಾ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದ ಅವರು . ಮನುಷ್ಯ ಸಮಾಜಮುಖಿಯಾಗಿ ಯೋಚಿಸಿ ಬದುಕಬೇಕು ಹಾಗೂ ಇತರರಿಗೆ ಮಾದರಿಯಾಗಬೇಕು. ನಾನು ನನ್ನಿಂದಲೆ ಎಂಬ ಅಹಂಕಾರವನ್ನು ಬಿಡಬೇಕು ಎಂದರು.
ದೇವರಲ್ಲಿ ನಂಬಿಕೆ ಪ್ರೀತಿ-ವಿಶ್ವಾಸ ಶಾಂತಿ ಇವುಗಳು ಮಾನವನ ನೆಮ್ಮದಿಯ ಜೀವನಕ್ಕೆ ಮೂಲಭೂತ ಮತ್ತು ಅವಶ್ಯಕವಾದ ಅಂಶಗಳಾಗಿವೆ. ಇಂದಿನ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಬದುಕು ಸಾಗಿಸುತ್ತಿರುವ ಪ್ರತಿಯೊಬ್ಬರೂ ಒತ್ತಡಗಳಿಂದ ಜೀವನವನ್ನು ಸಾಗಿಸುತ್ತಿದ್ದಾರೆ. ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕಾದರೆ ಧಾರ್ಮಿಕ ಆಚರಣೆಗಳನ್ನು ಕ್ರಮಬದ್ಧವಾಗಿ ಆಚರಿಸಬೇಕು ಮತ್ತು ಪಾಲಿಸಬೇಕು.
ಆದಷ್ಟು ಬೇಗ ಜಗತ್ತನ್ನು ತಲ್ಲಣಗೊಳಿಸಿದ ಈ ಕರೋನ ಮಹಾಮಾರಿ ತೊಲಗಿ ನಾಡಿಗೆ ಶುಭತರಲಿ ಎಂದು ನುಡಿದರು.
ಈ ಕಾರ್ಯಕ್ರಮದಲ್ಲಿ ಮುರುಗೇಶಪ್ಪಗೌಡ.ಪುಟ್ಟಸ್ವಾಮಿಗೌಡ್ರು. ಶಾಂತವೀರಪ್ಪಗೌಡರು. ಅರ್ಚಕರಾದ ರಾಚಪ್ಪ. ಶಿವಾನಂದಪ್ಪ. ಸೇರಿದಂತೆ ಇತರರು ಉಪಸ್ಥಿತಿ ಇದ್ದರು. ಗಣೇಶ್ ಕೆಂಚನಾಲ್ ಸ್ವಾಗತಿಸಿ. ಮಧುಕುಮಾರ ವಂದಿಸಿದರು.
ವರದಿ : ಸಬಾಸ್ಟಿನ್ ಮ್ಯಾಥ್ಯೂಸ್ ರಿಪ್ಪನ್ ಪೇಟೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್