Categories: Blog

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ.

ಘಟನೆಗೆ ಕಾರಣ ಏನು?

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..? ಬನ್ನಿ ಪ್ರಸನ್ನಕುಮಾರ್, ಅಧಿಕಾರಿಗಳು ಏನು ಮಷ್ಕಿರಿ ಮಾಡ್ತೀರಾ… ನಮಗೆ ಗೌರವ ಇಲ್ಲದ ಕಡೆ ಇರೋಲ್ಲ.. ನಾವು ಅಂತ ಅಧಿಕಾರಿಗಳಿಗೆ ಬೆಲೆ ಕೊಡಲ್ಲ ಎಂದರು. ಯಾರಿಗಾದರೂ ಅನುದಾನ, ಪರಿಹಾರ ಧನ ಕೊಟ್ಟರೆ ಮಾಹಿತಿ ನೀಡೋದಿಲ್ಲ.. ಯಾವ ಸಭೆಗೂ ಅಹ್ವಾನ ನೀಡೋದಿಲ್ಲ ಇವರಿಗೆ ಯಾವ ರೀತಿ ಉತ್ತರಿಸಬೇಕು ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಭೆ ಸಮಾರಂಭಗಳಲ್ಲಿ ಶಾಸಕರಿಗೆ ನೀಡುವಷ್ಟೇ ಗೌರವ ಮರ್ಯಾದೆ ಮತ್ತು ಸ್ಥಾನಮಾನಗಳನ್ನು ವಿಧಾನ ಪರಿಷತ್ ಸದಸ್ಯರಿಗೂ ನೀಡಬೇಕೆಂದು ಸರ್ಕಾರದ ಪ್ರೋಟೋಕಾಲ್  ನಿಯಮ ಇರುತ್ತದೆ .ಆದರೆ ಕೆಲವು ವರ್ಷಗಳಿಂದ ಸರ್ಕಾರಿ ಸಭೆ  ಕಾರ್ಯಕ್ರಮಗಳಲ್ಲಿ ವಿಧಾನಪರಿಷತ್ ಸದಸ್ಯರಿಗೆ ಪ್ರೋಟೋಕಾಲ್ ಪ್ರಕಾರ  ಗೌರವ ನೀಡದೆ ಆಹ್ವಾನಿಸದೆ ಮತ್ತು ಶಿಷ್ಟಾಚಾರದ ಪ್ರಕಾರ ಶಿವಮೊಗ್ಗ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನಿಸುತ್ತಿಲ್ಲ ಎಂದು ಕಳೆದ 2 ವರ್ಷಗಳ ಹಿಂದೆಯೇ ಮಾಜಿ ಲೋಕಸಭಾ ಸದಸ್ಯ ,ಮಾಜಿ ರಾಜ್ಯಸಭಾ ಸದಸ್ಯ ,ಮಾಜಿ ಶಾಸಕ, ಹಾಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ರವರು ಈ ಹಿಂದೆ ಸರ್ಕಾರದಲ್ಲಿ  ಈ ಬಗ್ಗೆ ಪ್ರಸ್ತಾವನೆ ಹಾಗೂ ದೂರನ್ನು  ಸಲ್ಲಿಸಿದ್ದರು .ಆದರೆ ಸರ್ಕಾರದ ಅಧಿಕಾರಿಗಳು ಇದಕ್ಕೆ ಕ್ಯಾರೆ ಎಂದಿರಲಿಲ್ಲ .ಈ ಹಿಂದೆ ಈ ಬಗ್ಗೆ ತೀರ್ಥಹಳ್ಳಿ  ಕ್ಷೇತ್ರದ ಶಾಸಕರಾದ ಕಿಮ್ಮನೆ ರತ್ನಾಕರ್ ರವರು ಸಹ ಶಾಸಕರಿಗೆ ಸಭೆ ಸಮಾರಂಭಗಳಲ್ಲಿ ಗೌರವಿಸುತ್ತಿಲ್ಲ ಪ್ರೋಟೋಕಾಲ್ ಪಾಲಿಸುತ್ತಿಲ್ಲ ಎಂದು ದೂರು ಸಹ ನೀಡಿದ್ದರು .

ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ .ಕೆ. ಎಸ್. ಈಶ್ವರಪ್ಪ ರವರ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ರವರು ಈ ಬಗ್ಗೆ ಮತ್ತು ಅಧಿಕಾರಿಗಳ ಧೋರಣೆಯ ಬಗ್ಗೆ ಕೆಂಡಾಮಂಡಲವಾಗಿ ,ಇನ್ನಿಬ್ಬರು ಸದಸ್ಯರು ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ ಹಾಗೂ ಪ್ರಸನ್ನ ಕುಮಾರ್ ರವರೊಂದಿಗೆ ಸಭೆಯಿಂದ ಹೊರನಡೆದು ಬಹಿಷ್ಕಾರ ಮಾಡುವ ಮಟ್ಟಕ್ಕೆ ಹೋಗಿದ್ದರು .ಅಷ್ಟರಲ್ಲಿ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಆಶ್ವಾಸನೆ ನೀಡಿರುವ ಕಾರಣ ಸಭೆಯಲ್ಲಿ ಭಾಗವಹಿಸಲು ಒಪ್ಪಿ ಸಭೆ ನಡೆಸಲು ನಡೆಯಲು ಅವಕಾಶ ಮಾಡಿಕೊಟ್ಟು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ವಿಶೇಷ ಪ್ರಕರಣವೊಂದು ಶಿವಮೊಗ್ಗ  ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ನಡೆಯಿತು.



ವರದಿ: ರಾಮನಾಥ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

8 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

8 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

9 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago