Headlines

ರಿಪ್ಪನ್ ಪೇಟೆ: ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ ನಿಧನ:

ರಿಪ್ಪನ್ ಪೇಟೆ: ಇಲ್ಲಿನ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ (61) ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಗುರುವಾರ ರಾತ್ರಿ ತೀವ್ರ ತರವಾದ ಎದೆನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.ಶುಕ್ರವಾರ ಮಧ್ಯಾಹ್ನ 12ಕ್ಕೆ ರಿಪ್ಪನ್ ಪೇಟೆಯ ಖಬರ್ಸ್ಥಾನ್ ನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಮೃತರು ಮೂವರು ಪುತ್ರಿಯರು,ಒರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version