ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು.
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ:
ಸುಳಕೋಡು ನಾರಾಯಣಪ್ಪ ನಿಧನಕ್ಕೆ ಮಾಜಿ ಶಾಸಕರಾದ ಕಾಗೋಡು ತಿಮ್ಮಪ್ಪ, ಬೇಳೂರು ಗೋಪಾಲಕೃಷ್ಣ, ಮಾಜಿ ಜಿಪಂ ಅಧ್ಯಕ್ಷರಾದ ಕಲಗೋಡು ರತ್ನಾಕರ್,ಬಿ ಪಿ ರಾಮಚಂದ್ರ,ರಾಜ್ಯ ಜೆಡಿಎಸ್ ಮುಖಂಡ ಆರ್ ಎ ಚಾಬುಸಾಬ್,ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್, ರಿಪ್ಪನ್ ಪೇಟೆ ಕಾಂಗ್ರೆಸ್ ಮುಖಂಡರಾದ ಮಧುಸೂದನ್, ಆಸೀಫ಼್ ಬಾಷಾಸಾಬ್,ಉಮಾಕರ,ಆರ್ ಎಸ್ ಶಂಶುದ್ಧೀನ್, ಉಲ್ಲಾಸ್,ಫ಼್ಯಾನ್ಸಿ ರಮೇಶ ಮತ್ತು ಜೆಡಿಎಸ್ ನ ಆರ್ ಎನ್ ಮಂಜುನಾಥ್,ಮುಡುಬ ಧರ್ಮಪ್ಪ ಹಾಗೂ ಇನ್ನಿತರ ಮುಖಂಡರು ಸಂತಾಪ ಸೂಚಿಸಿದ್ದಾರೆ.