ರಿಪ್ಪನ್ಪೇಟೆ:ಇಲ್ಲಿನ ಬೈರಾಪುರದ ಕಿರುಮಂತ್ರಾಲಯ ಶ್ರೀಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 23 ರಿಂದ 25 ರವರೆಗೆ ಗುರುರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನಾ ಮಹೊತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಟಿ.ಪುರುಷೋತ್ತಮ್ರಾವ್ ಮತ್ತು ಕಾರ್ಯದರ್ಶಿ ಕೆ.ದೇವರಾಜ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಮಾರ್ಗಸೂಚಿಯನ್ವಯ ಸರಳ ಸಂಪ್ರದಾಯದಂತೆ 23ರಂದು ಸೋಮವಾರ ಬೆಳಗ್ಗೆ ಪೂರ್ವಾರಾಧನೆ ಮತ್ತು ವಿಶೇಷ ಪೂಜೆಗಳು ತೀರ್ಥಪ್ರಸಾದ ವಿತರಣೆ, ಆಗಸ್ಟ್ 24 ರಂದು ಮಂಗಳವಾರ ಗುರುರಾಯರ ಆರಾಧನೆ ವಿಶೇಷ ಪೂಜೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಂತರ ವಿನಾಯಕ ಗಾನವೃಂದದವರಿಂದ ಭಕ್ತಿಗೀತೆಗಳ ಗಾನ ಸಂಭ್ರಮ ವ್ಯಕ್ತಿ ವಿಕಾಸ ಕೇಂದ್ರದವರಿಂದ ಸತ್ಸಂಗ ಭಜನಾವಳಿ ಕಾರ್ಯಕ್ರಮ ಆಗಸ್ಟ್ 25 ರಂದು ಬುಧವಾರ ಉತ್ತರಾರಾಧನೆ ವಿಶೆಷ ಪೂಜೆಗಳು ತೀರ್ಥಪ್ರಸಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು ಭಕ್ತರು ಪೂಜಾ ಕಾರ್ಯದಲ್ಲಿ ಭಾಗವಹಿಸುವಂತೆ ಮನವಿ ಮಾಡುವ ಮೂಲಕ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್