Categories: Blog

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು.
ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ವತಿಯಿಂದ  ಹೂಗುಚ್ಚ ನೀಡಿ ಸ್ವಾಗತಿಸಿದರು.
ನಂತರ ಗ್ರಾಮ ಪಂಚಾಯತ್ ಆವರಣದ ರಾಷ್ಟ್ರ ಕವಿ ಕುವೆಂಪು  ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಹಾಗೂ ಸಾರ್ವಜನಿಕರ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪ ರವರಿಗೆ ಮತ್ತು ಸಚಿವರಾದ ಆರಗ ಜ್ಞಾನೇಂದ್ರರವರಿಗೆ ಮತ್ತು ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪ ರವರಿಗೆ ಅಭಿನಂದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರಾದ ಕೆ ಎಸ್ ಈಶ್ವರಪ್ಪರವರು ಅತಿವೃಷ್ಟಿ ಸಂಧರ್ಭದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಮೊದಲ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದಂತೆ ಎಲ್ಲಾ ಸಚಿವರು ಅವರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸರಕಾರದ ಮೂಲಕ ಪರಿಹಾರ ಕ್ರಮ ಕೈಗೊಳ್ಳುವಂತೆ ತೀರ್ಮಾನಿಸಲಾಗಿತ್ತು.

ಆ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 418 ಕೋಟಿ ರೂ ನಷ್ಟು ಹಾನಿಯಾಗಿದ್ದು ಈ ಸಂಬಂಧ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ನಂತರ ಮಾತನಾಡಿದ ಆರಗ ಜ್ಞಾನೇಂದ್ರರವರು ತೀರ್ಥಹಳ್ಳಿ ಕ್ಷೇತ್ರಕ್ಕೆ ಶಾಸಕನಾಗಿ ಸೀಮಿತನಾಗಿದ್ದ ನನಗೆ ಪಕ್ಷದ ಮುಖಂಡರು ಗುರುತಿಸಿ ಸಚಿವ ಸ್ಥಾನ ನೀಡಿ ಇಡೀ ರಾಜ್ಯದ ಜವಬ್ದಾರಿಯನ್ನು ಕೊಟ್ಟಿದ್ದಾರೆ ಆ ನಿಟ್ಟಿನಲ್ಲಿ ಇನ್ನುಳಿದ ಎರಡು ವರ್ಷಗಳಲ್ಲಿ ಕೈ ಮೀರಿ ಕೆಲಸ ಮಾಡುತ್ತೇನೆ.ಕೊರೊನಾ ಸಂಧರ್ಭದಲ್ಲಿ ಹಗಲಿರಲು ಶ್ರಮಿಸಿದ ಕೊರೊನಾ ವಾರಿಯರ್ಸ್ ಗಳಿಗೆ ಈ ಸಂಧರ್ಭದಲ್ಲಿ ಅಭಿನಂದನೆ ತಿಳಿಸಿದರು.

ಹರತಾಳು ಹಾಲಪ್ಪ ನವರು ಮಾತನಾಡಿ ಶಿವಮೊಗ್ಗ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಕ್ಕಿರುವುದು ನನಗೆ ತುಂಬಾ ಸಂತೋಷದ ವಿಷಯವಾಗಿದೆ.ಮುಂದಿನ ದಿನಗಳಲ್ಲಿ ಎಲ್ಲಾರೂ ಒಟ್ಟಾಗಿ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಕೈ ಮೀರಿ ಶ್ರಮಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್,ಉಪಾಧ್ಯಕ್ಷರಾದ ಮಹಾಲಕ್ಷ್ಮಿ ಅಣ್ಣಪ್ಪ ಹಾಗೂ ಎಲ್ಲಾ ಗ್ರಾಪಂ ಸದಸ್ಯರುಗಳು, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್,ಮುಖಂಡರುಗಳಾದ ಆರ್ ಟಿ ಗೋಪಾಲ್,ಎಂ ಬಿ ಮಂಜುನಾಥ್, ನಾಗರಾಜ್ ಶೆಟ್ಟಿ, ಕಗ್ಗಲಿ ಲಿಂಗಪ್ಪ,ಸುರೇಶ್ ಸಿಂಗ್ ಹಾಗೂ ಗ್ರಾಪಂ ಪಿಡಿಒ ಚಂದ್ರಶೇಖರ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

4 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago