Categories: Blog

ರಿಪ್ಪನ್ ಪೇಟೆ : ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ರಿಪ್ಪನ್‌ಪೇಟೆ, 25 ಆಗಸ್ಟ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ 2021ರ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿದರು.


ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ ವಾಕ್ಯ. ಅವಿಭಾಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ” ಎಂದು ಅವರು ಹೇಳಿದರು.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಮಾತನಾಡಿ 1 ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹300/-, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹500/-, ಕುಟುಂಬಕ್ಕೆ ₹800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹950/- ಆಗಿರುತ್ತದೆ ಎಂದರು.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಎಲ್ಲಾ ರೀತಿಯ ಸೌಲಭ್ಯ ಪಡೆಯಬಹುದು,ಹೊರ ರೋಗಿ ವಿಭಾಗದಲ್ಲಿ
,ಒಳ  ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯಿತಿ,ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ,ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ,ಔಷಧಾಲಯಗಳಲ್ಲಿ ಶೇಕಡಾ 12 ರವರೆಗೆ ರಿಯಾಯಿತಿ,ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ ಇರುತ್ತದೆ.

·ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10% ರಿಯಾಯಿತಿ ಇರುತ್ತದೆ ಎಂದರು.

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಹಿರಿಯ ವ್ಯವಸ್ಥಾಪಕರಾದ ಶ್ರೀ ಕೆ. ಸಚಿನ್ ಕಾರಂತ್, ಉಪ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ, ಸಹಾಯಕ ವ್ಯವಸ್ಥಾಪಕರಾದ ಶ್ರೀ ಕೃಷ್ಣಪ್ರಸಾದ ಬಿ ಎಸ್ ಹಾಗೂ ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಶ್ರೀ ಶ್ರೀನಿವಾಸ್ ಭಾಗವತ್ ಇವರೆಲ್ಲರೂ ಉಪಸ್ಥಿತರಿದ್ದರು.

ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ಶ್ರೀನಿವಾಸ್ ಭಾಗವತ್ ಅವರನ್ನು @ 8105282145 ಸಂಪರ್ಕಿಸಬಹುದಾಗಿದೆ.


2021ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ರಿಪ್ಪನ್‌ಪೇಟೆ: ಪಿಯೂಸ್ ರೋಡ್ರಿಗಸ್: 9448914656, ರಕ್ಷಿತ್: 8971289756, ಸೈಂಟ್ ಮಿಲಾಗ್ರೆಸ್ ಸೌಹಾರ್ಧ: 8762449853, ಹೊಸನಗರ: ಶ್ರೀಕಂಠ ಎಚ್ ಆರ್: 9483016851, ಸೈಂಟ್ ಮಿಲಾಗ್ರೆಸ್ ಸೌಹಾರ್ಧ: 8095500036, ಶಾಂತಮೂರ್ತಿ: 9448787820, ಷಣ್ಮುಖಪ್ಪ: 9591866656, ನಾರಾಯಣ್ ಕಾಮತ್: 9449685877, ಶಮಿತ್ ಶಾರದ: 9482599047, ನಿಟ್ಟೂರು: ಕೃಷ್ಣಮೂರ್ತಿ: 9448600064, ಮಾಸ್ತಿಕಟ್ಟೆ: ಬಾಲಕೃಷ್ಣ: 9448914636.




ವರದಿ : ಚಿದಾನಂದ್ ರಿಪ್ಪನ್ ಪೇಟೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

4 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

4 hours ago

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…

15 hours ago

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago