ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿರುವ ಆಟೋ ಸ್ಟ್ಯಾಂಡ್ ಬಳಿ ಮಳೆ ಬಂದರೆ ಸಾಕು ಮಳೆ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಈಜುಕೊಳದಂತಾಗಿ ರಸ್ತೆಯ ಮೇಲೆ ನೀರು ಹರಿಯುತ್ತದೆ ಇದರಿಂದ ಪಾದಚಾರಿಗಳಿಗೆ ಹಾಗು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಇದರಿಂದ ಅನೇಕ ಸಣ್ಣಪುಟ್ಟ ಅಪಘಾತಗಳು ನಡೆದ ಉದಾಹರಣೆಗಳಿವೆ.
ಒಂದು ಕಡೆ ಮಳೆ ನೀರು ಹೋಗಲು ವ್ಯವಸ್ಥೆ ಇಲ್ಲದೆ ಈಜುಕೊಳವಾಗಿದ್ದರೆ ಇನ್ನೊಂದು ಕಡೆ ಕಾಟಚಾರಕ್ಕೆ ಹಾಕಿರುವ ಬ್ಯಾರಿಕೇಡ್, ತೀರ್ಥಹಳ್ಳಿ ರಸ್ತೆ ಯಲ್ಲಿ ಒಂದು ಕಡೆ ಬಸ್ ನಿಂತರೆ ಇನ್ನೊಂದು ಕಡೆ ಬ್ಯಾರಿಕೇಡ್ ಇದೆ ಹೀಗಾಗಿ ವಾಹನಗಳು ಹೇಗೆ ಸಂಚಾರ ಮಾಡಬೇಕು ಎಂಬುದು ವಾಹನ ಸವಾರರ ಹಾಗೂ ಸಾರ್ವಜನಿಕರ ಪ್ರೆಶ್ನೆಯಾಗಿದೆ..
ಅವೈಜ್ಞಾನಿಕ ಚರಂಡಿ ವ್ಯವಸ್ಥೆ ಯಿಂದ ಸಂಚಾರ ತೊಂದರೆ ಯಾಗುತ್ತಿದ್ದು ಆಟೋ ಸ್ಟ್ಯಾಂಡ್ ಬಳಿ ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಅಪಾಯಕ್ಕೆ ಅಹ್ವಾನ ಕೊಟ್ಟಂತಿದೆ ಈ ಕೂಡಲೇ ಜನಪ್ರತಿನಿದಿಗಳು ಹಾಗು ಸಂಬಂದಿಸಿದ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ವಾಹನ ಸವಾರರು ಹಾಗೂ ಸಾರ್ವಜನಿಕರ ಆಗ್ರಹವಾಗಿದೆ.
ಇನ್ನೂ ಲಾಕ್ಡೌನ್ ಹಾಗೂ ರಾತ್ರಿ ತಪಾಸಣೆಗೆ ಹಾಕಿರುವ ಬ್ಯಾರಿಕೇಡ್ ಕೂಡ ತೆಗೆಯಬೇಕಾಗಿದೆ. ಬ್ಯಾರಿಕೇಡ್ ಹಾಕಿರುವ ಉದ್ದೇಶ ಏನು ಎಂದು ವಾಹನ ಸವಾರರ ಹಾಗೂ ಸಾರ್ವಜನಿಕರ ಪ್ರಶ್ನೆಯಾಗಿದೆ.
ವರದಿ : ರಾಮನಾಥ್
ನಿರಂತರ ಸ್ಥಳೀಯ ಸುದ್ದಿಯನ್ನು ಪಡೆಯಲು ಪೋಸ್ಟ್ ಮ್ಯಾನ್ ಫೇಸ್ಬುಕ್ ಪೇಜ್ ನ್ನು ಲೈಕ್ ಮಾಡಿ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್