ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಸಿದ್ದಪ್ಪನ ಗುಡಿ ಸಮೀಪದಲ್ಲಿರುವ ಶ್ರೀ ಗುರುಸಾರ್ವಭೌಮರ ದೇವಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಮಂಗಳವಾರ ಸರಳವಾಗಿ ಕೋವಿಡ್ ನಿಯಮಾನುಸಾರ ಜರಗಿತು.
ವೇದ ಬ್ರಹ್ಮ ಚಂದ್ರಶೇಖರ್ ಭಟ್ ಅವರ ನೇತೃತ್ವದಲ್ಲಿ ಪೂಜಾಕೈಂಕರ್ಯ ಜರಗಿತು.
ಈ ಪೂಜಾ ಸಂದರ್ಭದಲ್ಲಿ ನೂರಾರು ಭಕ್ತರು ದೇವರ ದರ್ಶನವನ್ನು ಪಡೆದು ಪುನೀತರಾದರು .ಈ ಪೂಜಾ ಕಾರ್ಯಕ್ರಮದಲ್ಲಿ ಗುರು ರಾಘವೇಂದ್ರ ಸ್ವಾಮಿ ಸಮಿತಿಯ ಅಧ್ಯಕ್ಷರಾದ ಟಿ. ಪುರುಷೋತ್ತಮ್ ರಾವ್. ಪ್ರಧಾನ ಕಾರ್ಯದರ್ಶಿಯಾದ ಕೆ.ಜಿ.ದೇವರಾಜ್ ಕೆರೆಹಳ್ಳಿ .ಪ್ರಭಾಕರ್ ಭಟ್, ಷಣ್ಮುಖಪ್ಪಗೌಡ ಬೈರಾಪುರ, ರಾಘವೇಂದ್ರ ಬಿ.ಟಿ . ಎಂ.ಬಿ. ಮಂಜುನಾಥ್. ಮುರುಳಿ ಕೆರೆಹಳ್ಳಿ, ಹಿರಿಯಣ್ಣ ಬಂಡಾರಿ. ಶ್ರೀನಿವಾಸ್ ಆಚಾರ್. ಮುಂತಾದ ಸಮಿತಿಯ ಸದಸ್ಯರುಗಳು ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್