ಸಾಗರ: ರೈತರ ಬದುಕನ್ನು ಹಸನು ಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು.ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹರತಾಳು ಹಾಲಪ್ಪ ಹೇಳಿದರು.
ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು ಮಾಡಲಿಕ್ಕೆ ಸಾಧ್ಯವಾಗುತ್ತಿದೆ.
ಇದರ ಹಿಂದೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳ ಸಲಹೆ ಸಹಕಾರವೂ ಸಹ ಇದೆ ಎಂದು ಶ್ಲಾಘಿಸಿದರು.
ಈ ಅಭಿಯಾನ ಕಾರ್ಯಕ್ರಮದಲ್ಲಿ ಸರ್ಕಾರದ ಇತರೆ 7 ಇಲಾಖೆ ಅಧಿಕಾರಿಗಳು ಇರಬೇಕಿತ್ತು ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಇದು ಅಧಿಕಾರಿಗಳ ಅಸಡ್ಡೆ ಎಂದು ಅಧಿಕಾರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಕಾಶಿನಾಥ್.ತಾಲ್ಲೂಕು ಉಪ ವಿಭಾಗಾಧಿಕಾರಿ ನಾಗರಾಜ್.ಕೃಷಿ ಇಲಾಖೆಯ ಅಧಿಕಾರಿಗಳು ,ಸಿಬ್ಬಂದಿ ವರ್ಗದವರು ಹಾಗೂ ಇತರ ಇಲಾಖೆಯವರು ಹಾಜರಿದ್ದರು.
ವರದಿ: ಪವನ್ ಕುಮಾರ್ ಕಠಾರೆ.