ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಮಹೇಶ್ ಉಲ್ಮಾರ್ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು ಅನಗತ್ಯವಾಗಿ ರಾತ್ರಿ ವೇಳೆ ಪ್ರತಿಮೆಯನ್ನ ತೆರವುಗೊಳಿಸಲಾಗಿದೆ. ಇದರಿಂದ ಕೇವಲ ಶಿಕಾರಿಪುರ ಮಾತ್ರವಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲಿರೋ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳಿಗೆ ನೋವು ತಂದಿದೆ. ಮೂರ್ತಿಯನ್ನು 15 ದಿನದೊಳಗೆ ಮೊದಲು ಇದ್ದ ಜಾಗದಲ್ಲಿ ಪುನರ್ ಸ್ಥಾಪಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ತರಹದ ಹೋರಾಟವನ್ನ ಎದುರಿಸಬೇಕಾಗುತ್ತೆ.
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಶಿಕಾರಿಪುರ ಚಲೋ ಚಳುವಳಿಯನ್ನು ನಡೆಸಿ ಸಂಸದ ಬಿ.ವೈ ರಾಘವೇಂದ್ರರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಕೆಯನ್ನ ಕೊಟ್ಟರು.