ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ.
ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ ಭರತ್ ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ.
ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ ಮನೆಗೆ ಬಂದಿದ್ದಾನೆ. ಊಟ ಮುಗಿಸಿದ ನಂತರ ಮನೆಯ ಹಾಲ್ ನಲ್ಲಿ ಸೀರೆ ಕಟ್ಟಿಕೊಂಡು ಜೋಕಾಲಿ ಆಡಲು ಮುಂದಾಗಿದ್ದಾನೆ. ತಾಯಿ ಮತ್ತು ಅತ್ತೆ ಕೊಠಡಿಯಲ್ಲಿ ಮಲಗಲು ತೆರಳಿದ್ದಾರೆ.
ಜೋಕಾಲಿಯ ಸೀರೆ ಸುತ್ತಿಕೊಂಡು ಭರತ್ ನ ಕುತ್ತಿಗೆಗೆ ಸುತ್ತಿಕೊಂಡಿದೆ. ನೆಲಕ್ಕೆ ಕಾಲು ಊರಲು ಹೋದ ಪರಿಣಾಮ ಜೋಕಾಲಿ ನೇಣಾಗಿ ಪರಿಣಮಿಸಿದೆ. ಮಗುವಿನ ಶಬ್ದ ಕೇಳುತ್ತಿಲ್ಲವೆಂದು ತಾಯಿ ಹಾಲ್ ಗೆ ಬಂದು ನೋಡುವಷ್ಟರಲ್ಲಿ ಭರತ್ ನ ಪ್ರಾಣ ಪಕ್ಷಿ ಹಾರಿಹೋಗಿದೆ.
ಜಯನಗರದ ವಿಧಾತ್ರಿ ಕೆಫೆಯಿಂದ ಎರಡನೇ ಮನೆಯಲ್ಲಿ ಈ ಘಟನೆ ನಡೆದಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್