January 11, 2026

ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ..!

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರ ಪ್ರತಿಕೃತಿ ದಹಿಸುವ ಮೂಲಕ ಯುವಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ನಗರದ ಬಿಹೆಚ್ ರಸ್ತೆಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.

ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಮತ್ತು ಬುದ್ದಿ ಜೀವಿಗಳ ಬಗ್ಗೆ ಅಸಂಬದ್ದವಾಗಿ,ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚ ಎಂದು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು.

ತಾಲಿಬಾನ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ತಮ್ಮ ಬಾಯಿ ಚಪಲಕ್ಕಾಗಿ ಹೊಲಸು ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನ ಪಾದದ ಧೂಳಿಗೂ ಸಮನಲ್ಲದ ಈ ಯತ್ನಾಳ್ ಕನ್ನಡನಾಡಿನಲ್ಲಿ ಇರುವುದೇ ಒಂದು ಅಸಂಬದ್ದವಾಗಿದೆ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಧರ್ಮಗಳ ನಡುವೆ ಮಾತನಾಡಿ, ದೇಶದಲ್ಲಿ ಶಾಂತಿ ಕದಡುವ ಹೇಳಿಕೆ ನೀಡುತ್ತಿರುವ ಇಂತಹ ದೇಶದ್ರೋಹಿಗಳನ್ನ ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯಪಾಲರಲ್ಲಿ ಯುವ ಕಾಂಗ್ರೆಸ್ ಆಗ್ರಹಿಸಿದೆ.


ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್. ರಮೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್,ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್.ಕುಮರೇಶ್ , ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಶಿಕುಮಾರ್ ಸಿರಿಗೆರೆ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲೀಮ್ ಅಹಮ್ಮದ್ ಸಿರಿಗೆರೆ, ಪದಾಧಿಕಾರಿಗಳಾದ ಅರುಣ್ ನವುಲೆ , ವೆಂಕಟೇಶ್ ಕಲ್ಲೂರು , ಪವನ್ , ಮಸ್ತಾನ್ ,ಸುಹಾಸ್ ಗೌಡ , ಶ್ರೀನಿವಾಸ್ , ರಾಹುಲ್ ಸಿಗೇಹಟ್ಟಿ, ಪ್ರಶಾಂತ್ , ದೇವರಾಜ್ , ನಾಗರಾಜ್ , ವೆಂಕಟೇಶ್, ಅಭಿ, ಚೇತನ್ , ನಂದಕುಮಾರ್ , ರಾಖಿ ಇತರರು ಇದ್ದರು

About The Author

Leave a Reply

Your email address will not be published. Required fields are marked *

Exit mobile version