ಶಿವಮೊಗ್ಗ : ರಾಷ್ಟ್ರೀಯ ಹಣಗಳಿಕೆ ನೀತಿ (NMP) ಯೋಜನೆಯಡಿ ದೇಶದ ಆರು ಲಕ್ಷ ಕೋಟಿ ಆಸ್ತಿಯನ್ನು ಖಾಸಗಿ ಒಡೆತನಕ್ಕೆ ಮಾರಾಟ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ನಗರದ ರೈಲ್ವೆ ನಿಲ್ದಾಣ ದಲ್ಲಿ ರೈಲ್ವೆ ತಡೆ ಯತ್ನಿಸಿದ ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ದೇಶದಲ್ಲಿ ಅಚ್ಚೆ ದಿನ್ ತರುತ್ತೇನೆಂದು ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಸಾರ್ವಜನಿಕ ವಲಯದ ಆಸ್ತಿಗಳನ್ನು ರಾಷ್ಟ್ರೀಯ ಹಣಗಳಿಕೆಯ ನೀತಿಯಡಿಯಲ್ಲಿ ಸರಿ ಸುಮಾರು 6 ಲಕ್ಷ ಕೋಟಿಯ ಆಸ್ತಿಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡಲು ಹುನ್ನಾರ ನಡೆಸುತ್ತಿರುವುದು ತೀವ್ರ ಖಂಡನಿಯ ಈಗಾಗಲೇ NMP ಅಡಿಯಲ್ಲಿ 26, 700 ರಷ್ಟು ರಾಷ್ಟ್ರೀಯ ಹೆದ್ದಾರಿಗಳನ್ನು, 150 ರೈಲು, 400 ರೈಲ್ವೆ ಸ್ಟೇಷನ್, 25 ವಿಮಾನ ನಿಲ್ದಾಣ, 9 ಬಂದರುಗಳು , ಎರಡು ರಾಷ್ಟ್ರೀಯ ಕ್ರೀಡಾಂಗಣಗಳು, ವಿದ್ಯುತ್ ಘಟಕಗಳು, ಟೆಲಿಕಾಂ ನೆಟ್ವರ್ಕ್ಗಳು ಹೀಗೆ 13 ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡಿ ಅದಾನಿ- ಅಂಬಾನಿಯಂತಹ ಕಾರ್ಪೋರೆಟ್ ಕಂಪನಿಗಳಿಗೆ ದೇಶದ ಜನರನ್ನು ಅಡಿಯಾಳಾಗಿ ಮಾಡಲು ಹೊರಟಿರುವುದು ಬಿಜೆಪಿ ಸರ್ಕಾರದ ಸರ್ವಾಧಿಕಾರಿ, ಜನವಿರೋಧಿ ನೀತಿಯ ಎದ್ದು ಕಾಣುತ್ತದೆ ಕೂಡಲೇ ರಾಷ್ಟ್ರಪತಿಗಳು ಇಂತಹ ದೇಶವಿರೋಧಿ ಯೋಜನೆಗಳಿಗೆ ಕಡಿವಾಣ ಹಾಕಿ ಕಾರ್ಪೊರೇಟ್ ಕಂಪನಿಗಳಿಗೆ ಶಾಮೀಲಾಗಿರುವ ಇಂತಹ ದಳ್ಳಾಳಿ ಹಾಗೂ ದುರಾಳತನದ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ ಎಂದು ತಿಳಿಸಿದರು.
ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ಮಾಜಿ ಶಾಸಕರಾದ ಕೆ.ಬಿ ಪ್ರಸನ್ನ ಕುಮಾರ್ ಯುವ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರ ಹೆಚ್ .ಪಿ. ಗಿರೀಶ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ .ರಂಗನಾಥ್ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಯಮುನಾ ರಂಗೇಗೌಡ ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಇ. ಟಿ. ನಿತಿನ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮರೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.