ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇದ್ದರೂ ಅವಕಾಶವಿರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಕಾಲೇಜ್ ಎಂದು ಖ್ಯಾತಿ ಗಳಿಸಿರುವ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಸೋಮವಾರ ಭೇಟಿ ನೀಡಿ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಉಪನ್ಯಾಸಕ ವೃಂದದಿಂದ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಜೊತೆಗೆ ಶೈಕ್ಷಣಿಕ ಅಭಿವೃದ್ದಿಗೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಮಹಮ್ಮದ್ ನಜಾಹತ್ ಉಲ್ಲಾ. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಟಿ. ಡಿ. ಸೋಮಶೇಖರ್. ಸದಸ್ಯರುಗಳಾದ ಕಟ್ಟೆ ಮಹೇಶ್. ಹೇಮಾವತಿ.ಹಿರಿಯ ಉಪನ್ಯಾಸಕರಾದ ಹಾಲಪ್ಪ ಸಂಕೂರು ಶಂಕ್ರಪ್ಪ. ರಾಜು.ಶಾಂತ.ಬೆಂಜಮಿನ್ ಫ್ರಾನ್ಸಿಸ್.ನಾಗೇಶ್ ಸೋಮಯಾಜಿ.ಪ್ರಕಾಶ್ ಇನ್ನಿತರರಿದ್ದರು.
ವರದಿ: ಸಬಾಸ್ಟಿನ್ ಮ್ಯಾಥ್ಯೂಸ್ ರಿಪ್ಪನ್ ಪೇಟೆ