January 11, 2026

ಸಮಾಜದಲ್ಲಿ ಶಾಂತಿ ಕದಡುವ ದುಷ್ಟ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ನೂತನ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ಹೇಳಿದರು.

ಅವರು ಇಂದು ಶಿಕಾರಿಪುರಕ್ಕೆ ತೆರಳುವ ಮಾರ್ಗದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಹೇಳಲಾಗಿದ್ದರೂ ಕೂಡಾ ಕೆಲವು ವ್ಯಕ್ತಿಗಳು ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದು ಆಂತಹವರನ್ನು ಆರಂಭದಲ್ಲಿ ಚಿವುಟುವ ಕಾರ್ಯ ಮಾಡಲು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ, ಇನ್ನೂ ಇಂತಹ ಶಾಂತಿ ಕದಡುವ ಹೀನಕೃತ್ಯ ಕಂಡು ಬಂದಲ್ಲಿ ಅಂತಹ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಆಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ,ಆರ್ ಎ ಚಾಬುಸಾಬ್, ಕಗ್ಗಲಿ ಲಿಂಗಪ್ಪ, ಎನ್.ಸತೀಶ್, ಆರ್.ರಾಘವೇಂದ್ರ, ರಾಘು, ಹೆಚ್.ಎಸ್.ಸುಧೀಂದ್ರ ಹೆಬ್ಬಾರ್, ಸುಧೀಂದ್ರ ಪೂಜಾರಿ, ವಾಸುಶೆಟ್ಟಿ, ಕುಕ್ಕೆಪ್ರಶಾಂತ್,ಮುಡುಬಾ ಧರ್ಮಪ್ಪ ಇನ್ನಿತರರು ಹಾಜರಿದ್ದರು.





ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..


https://chat.whatsapp.com/KlIbXYr74Ee5ph5noWzuHw

About The Author

Leave a Reply

Your email address will not be published. Required fields are marked *