ಸಾಗರ : ಮಕ್ಕಳು ಓದಿ ವಿದ್ಯಾವಂತರಾಗಲೆಂದು ಹಲವು ಕನಸುಗಳನ್ನು ಕಂಡು ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ.ಆದರೆ ಶಾಲೆಯಲ್ಲಿ ಶಿಕ್ಷಕರೇ ಸರಿಯಾಗಿ ಬೋಧನೆ ಮಾಡದಿದ್ದರೆ ಮಕ್ಕಳು ವಿದ್ಯಾಭ್ಯಾಸ ಕಲಿಯುವುದು ಹೇಗೆ ಎಂಬುವುದು ಸರ್ವೇ ಸಾಮಾನ್ಯ ವಿಚಾರ.
ಆದರೆ ಇದೀಗ ಇಲ್ಲೋಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಹಾಗೂ ಬಿಇಒ ಕಚೇರಿ ಮುಂದೆ ಗ್ರಾಮಸ್ಥರು ಹಾಗೂ ಎಸ್ಡಿಎಂಸಿ ಸದಸ್ಯರು ಶಿಕ್ಷಕರ ನಿಯೋಜನೆ ಮಾಡಲೆಂದು ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿಂದೆ ಗ್ರಾಮದಲ್ಲಿ ಮಾದರಿ ಶಾಲೆಯಾಗಿತ್ತು.ಅಂದು ಪೋಷಕರೂ ಮಕ್ಕಳನ್ನು ಸೇರಿಸಲು ನಾಮುಂದೆ ತಾಮುಂದೆ ಎಂದು ಶಾಲೆ ಸೇರಿಸುತ್ತಿದ್ದರು ಆದರೆ ಇದೀಗ ಪೋಷಕರು ಮಕ್ಕಳನ್ನು ಈ ಶಾಲೆಗೆ ಸೇರಿಸಲೋ ಬೇಡವೋ ಎಂದು ಯೋಚನೆ ಮಾಡುವಂತಹ ಪರಿಸ್ಥಿತಿಗೆ ಈ ಶಾಲೆ ಇದೀಗ ತಲುಪಿದೆ.
ಇಲ್ಲಿ ಇಬ್ಬರು ಶಿಕ್ಷಕರನ್ನು ಸರ್ಕಾರ ನಿಯೋಜನೆ ಗೊಳಿಸಿತ್ತು ಆದರೆ ಒಬ್ಬ ಶಿಕ್ಷಕರು ಕಳೆದ 5ವರ್ಷಗಳಿಂದ ತಿಂಗಳಿಗೆ ಒಮ್ಮೆ ಅಥವಾ 2 ಬಾರಿ ಶಾಲೆಗೆ ಬಂದು ಬೋಧನೆ ಮಾಡುತ್ತಿದ್ದಾರೆ ಇದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ ಹಾಗಾಗಿ ನಮ್ಮ ಶಾಲೆಗೆ ಉತ್ತಮ ಶಿಕ್ಷಕರನ್ನು ನಿಯೋಜನೆ ಮಾಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಂತೆ ಗ್ರಾಮ ಪಂಚಾಯತ್ ಸದಸ್ಯ ಆನಂದ್ ಹರಟೆ ಅವರು ಮನವಿ ಮಾಡಿದ್ದಾರೆ.
ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಮಾತನಾಡಿದ ಅವರು ಕಳೆದ 5 ವರ್ಷದಿಂದ ನಮ್ಮ ಊರಿನ ಶಾಲೆಗೆ ಇಬ್ಬರಲ್ಲಿ ಒಬ್ಬ ಶಿಕ್ಷಕರು ಸರಿಯಾಗಿ ಬರುತ್ತಿಲ್ಲ ಗೈರು ಹಾಜರಾಗುತ್ತಿದ್ದಾರೆ ಇದರಿಂದ ಮಕ್ಕಳಿಗೆ ಅನಾನುಕೂಲವಾಗುತ್ತಿದೆ ಸರ್ಕಾರಿ ಶಾಲೆಯನ್ನು ಎಲ್ಲರೂ ಸೇರಿ ಉಳಿಸಬೇಕಾದುದು ನಮ್ಮ ಆದ್ಯ ಕರ್ತವ್ಯವಾಗಿದೆ ಹಾಗಾಗಿ ತಕ್ಷಣ ನಮ್ಮ ಶಾಲೆಗೆ ಶಿಕ್ಷಕರನ್ನು ನಿಯೋಜಿಸಬೇಕೆಂದು ಮನವಿ ಮಾಡುತ್ತೆವೆ ಎಂದು ತಿಳಿಸಿದರು.
ವರದಿ:ಪವನ್ ಕುಮಾರ್ ಕಠಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್