Categories: Blog

ಹೊಸನಗರ: ಯುವಕನ ಕಿಡ್ನಿ ವೈಫಲ್ಯ,ಚಿಕಿತ್ಸೆಗೆ ನೆರವು ಯಾಚನೆ :


ಹೊಸನಗರ: ಇಲ್ಲಿನ ಮಾರಿಗುಡ್ಡ ವಾಸಿಯಾದ ಯುವಕನೊಬ್ಬ 3 ವರ್ಷಗಳಿಂದ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗದೆ ಅವರ ಕುಟುಂಬ ದಾನಿಗಳಿಂದ ನೆರವು ಯಾಚಿಸಿದೆ.

ಹೊಸನಗರದ ಮಾರಿಗುಡ್ಡ ವಾಸಿಯಾದ ಮಂಜುನಾಥ ಮತ್ತು ಪದ್ಮಾವತಿ ದಂಪತಿಗಳ  ಮಗನಾದ 23  ವರ್ಷ ವಯ್ಯಸ್ಸಿನ ಶರತ್ ಎಂಬುವವರು ಸುಮಾರು 3 ವರ್ಷದಿಂದ ಕಿಡ್ನಿ ವೈಫಲ್ಯಗೊಂಡಿದ್ದು, ಆರ್ಥಿಕ ಸಮಸ್ಯೆಯಿಂದಾಗಿ ಡಯಾಲಿಸಿಸ್ ಮಾಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಆರಂಭವಾಗಿದೆ, ಇನ್ನೂ ಹೆಚ್ಚಿನ  ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಾಯಲಕ್ಕೆ ಹೋಗಬೇಕಾಗಿದ್ದು, ಇದಕ್ಕಾಗಿ ಸುಮಾರು 40 ಲಕ್ಷ  ರೂ. ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆ ವೆಚ್ಚ ನಿಭಾಯಿಸುವುದು ಹೇಗೆ ಎಂಬ ಚಿಂತೆ ಈ ಕುಟುಂಬಕ್ಕೆ ಉಂಟಾಗಿದೆ ಎಂದು ಅವರ ತಂದೆ ತಾಯಿ ದುಖಃ ವ್ಯಕ್ತ ಪಡಿಸಿದ್ದಾರೆ.

ಜೀವನ ಪೂರ್ತಿ ಡಯಾಲಿಸಿಸ್ ಮಾಡಬೇಕು. ಇಲ್ಲವಾದಲ್ಲಿ ಕಿಡ್ನಿ ಕಸಿ ಮಾಡಬೇಕು. ಡಯಾಲಿಸಿಸ್ಗೆ ತಿಂಗಳಿಗೆ ಸುಮಾರು 40 ಸಾವಿರ ರೂ. ಖರ್ಚಾಗುತ್ತದೆ. ಯುವಕನ ತಂದೆ ತಾಯಿ ಆಸ್ಪತ್ರೆಯಿಂದ  ಸಾಧ್ಯವಾದಷ್ಟು ಸಹಕಾರ ನೀಡಲಾಗಿದೆ ಎನ್ನುತ್ತಾರೆ.

ಈ ಹಿಂದೆ ತನ್ನ ತಂದೆಯ ಕಿಡ್ನಿಯನ್ನು ಕೊಡುವುದಾಗಿ ರಕ್ತ ಪರೀಕ್ಷೆ ನಡೆಸಿ, ನಂತರ ತಂದೆಯ ಕಿಡ್ನಿ ಸರಿ ಹೊಂದುವುದಿಲ್ಲವೆಂದು  ಮತ್ತೆ ಚಿಕಿತ್ಸೆ ಮುಂದುವರೆಸಿದ ನಂತರ ತನ್ನ ತಾಯಿಯ ಕಿಡ್ನಿಯನ್ನು ಕೊಟ್ಟು ತನ್ನ ಮಗನ ಜೀವನವನ್ನು ಸರಇಮಾಡಬೇಕೆಂದು ಈ ಇಡೀ ಕುಟುಂಬ ಹೋರಾಟ ಮಾಡುತ್ತಾ ಇದೆ.


ಈ ಕುಟುಂಬದ ಪರಿಸ್ಥಿರಿಸ್ಥಿತಿಯನ್ನು ಕಂಡು ಮಾಸ್ತಿಕಟ್ಟೆಯ ಸುಬ್ರಮಣ್ಯರವರು 25,000/-ರೂ ಹಣ ಸಹಾಯ ಮಾಡಿದ್ದಾರೆ. ಹಾಗೂ ಹಲವಾರು ಸಂಘಟನೆಗಳು ಇವರಿಗೆ ಸಹಾಯ ಮಾಡಿದ್ದರೂ ದಿನನಿತ್ಯದ ಸಂಸಾರದ ಖರ್ಚು ಹಾಗೂ ವೈದ್ಯಕೀಯ ಖರ್ಚುಗಳನ್ನು ತೂಗಿಸಿಕೊಂಡು ಹೋಗುವುದೇ ಸವಾಲಾಗಿದೆ. ಈ ಕುಟುಂಬಕ್ಕೆ ಮನೆಯೊಂದನ್ನು ಬಿಟ್ಟು ಬೇರೇ ಯಾವುದೇ ಆದಾಯವಿಲ್ಲದೇ ಈ ಕುಟುಂಬ ಹೆಚ್ಚಿನ ಚಿಕಿತ್ಸೆಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ, ಮುಂದಿನ ದಿನಗಳಲ್ಲಿ ಯುವಕನ ಚಿಕಿತ್ಸೆಗಾಗಿ ನಾವುಗಳೆಲ್ಲಾರೂ ಕೈ ಜೋಡಿಸಿದರೆ ಈ ಬಾಲಕನ ಜೀವನಕ್ಕೆ ದಾರಿಯಾಗುತ್ತದೆ, ಹಾಗೂ ಪಕ್ಷದ ಮುಖಂಡುರುಗಳಿಂದ ಹೆಚ್ಚಿನ ಸಹಕಾರ ನೀಡುವುದಾಗಿ ಮಾಸ್ತಿಕಟ್ಟೆ ಸುಬ್ರಮಣ್ಯರವರು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯ ಅಶ್ವಿನಿಕುಮಾರ್, ಬಾವಿಕಟ್ಟೆ ಸತೀಶ್, ಉದಯ್ ಗೌಡ, ಜಯನಗರ ಗುರು, ಸಾಮಾಜಿಕ ಜಾಲತಾಣದ ಹೊಸಮನೆ ಚೇತನ್ ದಾಸ್ ಹಾಗೂ ಇನ್ನಿತರರಿದ್ದರು.

ನೆರವು ನೀಡುವ ದಾನಿಗಳು ಈ ಸಂಖ್ಯೆಯನ್ನು ಸಂಪರ್ಕಿಸಿ.

ಹೆಸರು:- ಶರತ್                                                        
ಖಾತೆ ಸಂಖ್ಯೆ :- ಕೆನರಾ ಬ್ಯಾಂಕ್, 0465101018162                                   
ಐ.ಎಫ್.ಎಸ್ಸಿ ಕೋಡ್  .ಸಿ.ಎನ್.ಆರ್.ಬಿ. 0000465                                           
Google pay number:9964294970                                                         

SHARATH KUMAR K M
S/O MANJUNATHA
MARIGUDDA ROAD
Hosanagara tluk.
SHIVAMOGA DISt.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

2 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago