ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು
ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…