ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ..!
ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರ ಪ್ರತಿಕೃತಿ ದಹಿಸುವ ಮೂಲಕ ಯುವಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಬಿಹೆಚ್ ರಸ್ತೆಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಮತ್ತು ಬುದ್ದಿ ಜೀವಿಗಳ ಬಗ್ಗೆ ಅಸಂಬದ್ದವಾಗಿ,ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚ…