ಗಣೇಶ ಚತುರ್ಥಿ, ಮೊಹರಂ ಹಬ್ಬ; ರಾಜ್ಯ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆ:
ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ…