w
Headlines
Home » ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ

ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ.

  ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಮಂತ್ರಿ ಸ್ಥಾನ ಕೊಟ್ಟರೆ ಉತ್ತಮವಾಗಿ ಕಾರ್ಯವನ್ನು ನಿರ್ವಹಿಸುತ್ತೇನೆ. ನಾನು ಹೊಸನಗರ,ಸೊರಬ,ಸಾಗರ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ವಿಜಯಶಾಲಿಯಾಗಿದ್ದೇನೆ,ಸುಮಾರು ಅರ್ಧ ಜಿಲ್ಲೆಯನ್ನು ನಾನು ಪ್ರತಿನಿಧಿಸಿದ್ದೇನೆ ಎಂದರು.
ಈ ಬಾರಿ ನನಗೆ ಮಂತ್ರಿ ಸ್ಥಾನ ಒಲಿಯುವ ಸಾಧ್ಯತೆಗಳಿವೆ ಮಾಧ್ಯಮದಲ್ಲಿ ಹಿರಿಯರಿಗಿಂತ ಕಿರಿಯರಿಗೆ ಈ ಬಾರಿ ಹೆಚ್ಚಿನ ಅವಕಾಶವನ್ನು ನೀಡುವುದಾಗಿಯೂ ತೋರಿಸುತ್ತಿರುವುದರಿಂದ ನನಗೂ ಮಂತ್ರಿ ಸ್ಥಾನ ಒಲಿಯುವ ನಿರೀಕ್ಷೆಗಳಿವೆ ಎಂದರು.

 ಪಕ್ಷದ ಶಿಸ್ತಿನ ಸಿಪಾಯಿಯಾಗಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ
 ಬದ್ದನಾಗಿದ್ದೇನೆ ಎಂದು ಸುದ್ದಿಗಾರರೊಂದಿಗೆ ತಿಳಿಸಿದರು.




ವರದಿ: ಪವನ್ ಕುಮಾರ್ ಕಠಾರೆ.




ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.