ರಿಪ್ಪನ್ ಪೇಟೆ: ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು.
ಈಗ ಸ್ತ್ರೀಶಕ್ತಿ ಸಮುದಾಯ ಭವನದ ಸುತ್ತ ಮುತ್ತ ಗಿಡ ಗಂಟೆಗಳು, ಪೊದೆಗಳು ಬೆಳೆದಿದ್ದು ಅನೈತಿಕ ಚಟುವಟಿಕೆಗೆ ಕೈ ಬೀಸಿ ಕರೆಯುವಂತಿದೆ.ಲಕ್ಷಾಂತರ ರೂ ಮೌಲ್ಯದ ಪೀಠೋಪಕರಣಗಳು ನಿರ್ವಹಣೆ ಇಲ್ಲದೆ ಗೆದ್ದಲು ಹಿಡಿಯುತ್ತಿದೆ.
ಇಲ್ಲಿಗೆ ಕೂಗಳತೆ ದೂರದಲ್ಲಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಇದ್ದು,ಈ ಸಮುದಾಯ ಭವನದ ಬಳಿ ಕಾಣಸಿಗುವ ಮದ್ಯ ಕುಡಿದು ಬಿಸಾಡಿದ ಬಾಟಲ್ ಗಳು ಮುಂದೆ ಆಗುವ ಭಯಂಕರ ಅನಾಹುತದ ಬಗ್ಗೆ ಸ್ಪಷ್ಟವಾಗಿ ಸೂಚಿಸುವಂತಿದೆ.
ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್ ಪೇಟೆ ಮಾಜಿ ಗ್ರಾಪಂ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ನಮ್ಮ ಆಡಳಿತ ಸಮಯದಲ್ಲಿ ಶಾಸಕರ ಸಹಕಾರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಎಲ್ಲಾ ಜನರಿಗೆ ಉಪಕಾರಿಯಾಗಲು ಈ ಸ್ತ್ರೀ ಶಕ್ತಿ ಸಮುದಾಯ ಭವನವನ್ನು ನಿರ್ಮಿಸಲಾಗಿತ್ತು ಆದರೆ ಇದರ ಸರಿಯಾದ ನಿರ್ವಹಣೆ ಇಲ್ಲದೇ ಈಗ ಅನೈತಿಕ ಚಟುವಟಿಕೆಯ ತಾಣವಾಗಿರುವು ದುರದೃಷ್ಟಕರ ಎಂದರು.
ಇಲ್ಲಿನ ಸುತ್ತಮುತ್ತ ವಾಸವಿರುವ ನಾಗರಿಕರಿಗೆ ಶಾಂತಿಭಂಗ ಉಂಟಾಗುತ್ತಿದೆ ಹಾಗೂ ಮದ್ಯದ ಅಮಲಿನಲ್ಲಿ ಸಮುದಾಯ ಭವನದ ಕಿಟಕಿ ಹಾಗೂ ಬಾಗಿಲುಗಳನ್ನು ಕಿಡಿಗೇಡಿಗಳು ಒಡೆದು ಜಖಂಗೊಳಿಸಿದ್ದಾರೆ. ಸಮುದಾಯ ಭವನದ ಪಕ್ಕದಲ್ಲಿರುವ ರಸ್ತೆಯಲ್ಲಿ ಒಂಟಿಯಾಗಿ ವಿದ್ಯಾರ್ಥಿಗಳು,ಮಹಿಳೆಯರು ಸಂಚರಿಸಲು ಭಯ ಪಡಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಂಡು ಈ ಸಮುದಾಯ ಭವನವನ್ನು ಪೊದೆಗಳಿಂದ ರಕ್ಷಿಸಿ, ಸಮುದಾಯ ಭವನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲು ರಿಪ್ಪನ್ ಪೇಟೆ ಮಾಜಿ ಗ್ರಾ ಪಂ ಸದಸ್ಯ ಕೆರೆಹಳ್ಳಿ ರವೀಂದ್ರ ಆಗ್ರಹಿಸಿದ್ದಾರೆ.
ಒಟ್ಟಾರೆಯಾಗಿ ಜನರ ಸದುಪಯೋಗಕ್ಕಾಗಿ ನಿರ್ಮಾಣಗೊಂಡ ಈ ಸಮುದಾಯ ಭವನವು ಅನೈತಿಕ ಚಟುವಟಿಕೆಯ ತಾಣವಾಗಿರುವುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಕಟ್ಟಡವನ್ನು ನವೀಕರಿಸಿ ಸೂಕ್ತ ರೀತಿಯಲ್ಲಿ ಸರ್ಕಾರದ ಆಸ್ತಿಯನ್ನು ಬಳಸಿಕೊಳ್ಳಬೇಕಾಗಿದೆ.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್