Headlines

ಭದ್ರಾವತಿ : KSRTC ಬಸ್ ನಿಲ್ದಾಣಕ್ಕೆ ಎಂ ಜೆ ಅಪ್ಪಾಜಿ ಹೆಸರಿಡಲು ಆಗ್ರಹ

ಭದ್ರಾವತಿ: ನಗರದ ಕೆಎಸ್‌ಆರ್‌ ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿ: ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣ ಗೊಳಿಸುವಂತೆ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾ ಣಕ್ಕೆ ಅಗತ್ಯವಿರುವ  ಅನುದಾನ ಶೀಘ್ರ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಸಚಿವ ಕೆ.ಎಸ್ ಈಶ್ವರಪ್ಪ ರವರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಮೂರು ಬಾರಿ ಶಾಸಕರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ಎಲ್ಲಾ ವರ್ಗದ ಜನರ ಏಳಿಗೆಗಾಗಿ ಹಗಲಿರುಳು ಶ್ರಮಿಸಿರುವ ದಿ: ಎಂ.ಜೆ ಅಪ್ಪಾಜಿ ಅವರ ಹೆಸರನ್ನು ನಗರದ ಕೆಎಸ್‌ಆರ್‌ ಟಿಸಿ ಬಸ್‌ನಿಲ್ದಾಣಕ್ಕೆ ನಾಮಕರಣ ಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ.

ಹಳೆನಗರದ  ಬಿಇಓ ಕಛೇರಿ ಹಿಂಭಾಗ ದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿ ದ್ದು, ಸರ್ಕಾರದಿಂದ ಬಿಡುಗಡೆಯಾಗಿ ರುವ 2 ಕೋ. ರೂ. ಹಾಗು ನಗರಸಭೆ ವತಿಯಿಂದ ಬಿಡುಗಡೆಯಾಗಿರುವ 50 ಲಕ್ಷ ರೂ, ಅನುದಾನದಲ್ಲಿ ಕಾಮಗಾರಿ ನಡೆದಿದ್ದು, ಪೂರ್ಣಗೊಳ್ಳಲು ಇನ್ನೂ 5.5 ಕೋ. ರು. ಅವಶ್ಯಕತೆ ಇದ್ದು, ತಕ್ಷಣ ಈ ಸಂಬಂಧ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿಸಿಕೊಡುವಂತೆ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಮ್‌ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ಎಂ.ವಿ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸುವ ಜೊತೆಗೆ ಸಚಿವ ಈಶ್ವರಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

Leave a Reply

Your email address will not be published. Required fields are marked *

Exit mobile version