w
Headlines
Home » ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ.
ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು.
ಆಸೀಫ಼್ ಭಾಷಾಸಾಬ್ ರವರು ಎರಡು ಅವಧಿಗೆ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಹಲವಾರು ಸಂಘ ಸಂಸ್ಥೆಗಳಲ್ಲಿ ಉತ್ಸಾಹದಿಂದ ಸೇವೆ ಸಲ್ಲಿಸುತ್ತಿದ್ದಾರೆ.ಯುವ ಮುಖಂಡರಾಗಿ ಉತ್ತಮ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ.

ಪಕ್ಷ ಹೇಳಿದ ಎಲ್ಲಾ ಸಂಘಟನಾತ್ಮಕ ಕೆಲಸಗಳನ್ನು ಹಾಗೂ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನ ಸಾಮಾನ್ಯ‌ರಿಗೆ ತಲುಪಿಸುವಲ್ಲಿಯೂ ಆಸೀಫ಼್ ಭಾಷಾಸಾಬ್ ಅವರು ಮುಂಚೂಣಿಯಲ್ಲಿದ್ದಾರೆ.
ಈ ಪದಗ್ರಹಣ ಹಾಗೂ ಜವಾಬ್ದಾರಿ ಹಂಚಿಕೆ ಕಾರ್ಯಕ್ರಮದಲ್ಲಿ  ಜಿಪಂ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ,ಸಾಗರ ತಾಪಂ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಕ್ರೆ, ಜಿಪಂ ಮಾಜಿ ಸದಸ್ಯರಾದ ಶ್ವೇತಾ ಬಂಡಿ, ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್,ಕಾಂಗ್ರೆಸ್ ಮುಖಂಡರಾದ ಸದಾಶಿವ ಶೆಟ್ಟಿ, ಏರಿಗೆ ಉಮೇಶ್,ಚಂದ್ರಮೌಳಿ, ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಮಧುಸೂದನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.