Categories: Blog

ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಭಾರತದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಕ್ಷದ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಮೋದಿ ಅವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಉಗ್ರರರನ್ನು ಮಣಿಸಿದರು. 370ನೇ ವಿಧಿ ತೆಗೆದು ಹಾಕಿದರು ಕೊರೊನಾದಂತಹ ಸಂದಿಗ್ಧ ಸಮಯದಲ್ಲೂ ಜಗತ್ತೇ ಅಚ್ಚರಿಪಡುವಷ್ಟು ಉಚಿತ ಲಸಿಕೆ ನೀಡಿದ್ದಾರೆ.  ಅವರ ಆಡಳಿತದಲ್ಲಿ ಇವೆಲ್ಲ ವಿಸ್ಮಯ ಮೂಡಿಸಿವೆ. ಹಾಗಾಗಿ ಮೋದಿ ಒಬ್ಬರು ಸಂತ ಎಂದು ಬಣ್ಣಿಸಿದರು.
ಮೋದಿಯವರ ಜನಪ್ರಿಯತೆ ಸಹಿಸದ ಕಾಂಗ್ರೆಸ್‌ ವಿನಾಕಾರಣ ದೂಷಣೆ ಮಾಡುತ್ತಿದೆ. ರಾಹುಲ್ ಗಾಂಧಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬಿಜೆಪಿಯಯದು ನಾಟಕದ ಹಿಂದುತ್ವ ಎಂದು ಹೇಳಿದ್ದಾರೆ. ಈ ದೇಶದ ಜನರಿಗೆ ಯಾರು ನಾಟಕ ಮಾಡುತ್ತಾರೆ ಎಂದು ಗೊತ್ತಿದೆ. ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ. ವ್ಯಕ್ತಿ ಒಂದು ಶಕ್ತಿಯಾಗುವುದು ಸಹಿಸಲು ಅವರಿಗೆ ಆಗುತ್ತಿಲ್ಲ ಎಂದು ಕುಟುಕಿದರು.

ಪ್ರಾಸ್ತಾವಿಕ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಇಡೀ ದಿನ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಮೋದಿ ಅವರ ಸಾಧನೆ ತಿಳಿಸುವುದು. ಕಾರ್ಯಕರ್ತರಲ್ಲಿ ಸಂಘಟನೆ ಮನೋಭಾವ ಬೆಳೆಸುವುದು, ಅಭಿವೃದ್ಧಿಯ ಅನುಕರಣೆ ಮಾಡಲು ಪ್ರೋತ್ಸಾಹ ನೀಡಲು ಜಿಲ್ಲೆಯಾದ್ಯಂತ ಕಾರ್ಯಕ್ರಮ ಮುಂದುವರಿಯಲಿದೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ,ಮಾಜಿ ಸದಸ್ಯ ಆರ್.ಕೆ.ಸಿದ್ಧರಾಮಣ್ಣ, ಗಿರೀಶ್ ಪಟೇಲ್, ‘ಸೂಡಾ’ ಅಧ್ಯಕ್ಷ ಎಸ್‌.ಎಸ್‌.ಜ್ಯೋತಿಪ್ರಕಾಶ್, ‘ಕಾಡಾ’ ಅಧ್ಯಕ್ಷೆ ಪವಿತ್ರಾರಾಮಯ್ಯ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್‌.ದತ್ತಾತ್ರಿ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನದಲ್ಲಿ ಜನರಿಗೆ ಕೋವಿಡ್‌ ಲಸಿಕೆ ನೀಡಲಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

48 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago