ತೀರ್ಥಹಳ್ಳಿ: ಹಾಲಿ ಗೃಹಮಂತ್ರಿ ಹಾಗೂ ತೀರ್ಥಹಳ್ಳಿಯ ಶಾಸಕರಾದ ಆರಗ ಜ್ಞಾನೇಂದ್ರರವರ ಹನ್ನೊಂದು ತಿಂಗಳಿನ ಮೊಮ್ಮಗ ಆರ್ಯವರ್ಥ ನಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಸರ್ಕಾರಿ ತಾಲೂಕು ಆಸ್ಪತ್ರೆಯಾದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ದಾಖಲಿಸಲಾಗಿತ್ತು.
ತವರಿನ ಪ್ರವಾಸದಲ್ಲಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದರು..
ಮಗುವಿನೊಂದಿಗೆ ಕೆಲಕ್ಷಣ ಸಂತಸದಿಂದ ಕಳೆದರು ನಂತರ ಮಾದ್ಯಮದೊಂದಿಗೆ ಮಾತನಾಡಿದ ಅವರು ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಉತ್ತಮ ರೀತಿಯಲ್ಲಿ ಕೊಡುತಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದೆ ಎಂದರು.
ನಂತರ ಆರಗರ ಒಡನಾಡಿ, ಉದ್ಯಮಿ ಹಾಗೂ ಸಂಘದ ಕಾರ್ಯಕರ್ತ ಎಸಿಸಿ ಕೃಷ್ಣಮೂರ್ತಿ ಮಾತನಾಡಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ಹಿಂದೆ ಜ್ಞಾನೇಂದ್ರರು ತಮ್ಮ ಮಗ ಅಭಿನಂದನ್ ರ ಮದುವೆಯನ್ನು ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಸರಳವಾಗಿ ನೆರವೇರಿಸಿ ಮಾದರಿಯಾಗಿದ್ದರು.
ಕೋಟಿ ಕೋಟಿ ಕೊಳ್ಳೆ ಹೊಡೆದು ಐಶಾರಾಮಿ ಜೀವನ ನಡೆಸುವ ಹಾಗೂ ಚಿಕ್ಕಪುಟ್ಟ ಆರೋಗ್ಯ ಸಮಸ್ಯೆಗಳಿಗೆ ವಿದೇಶಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರಾಜಕಾರಣಿಗಳ ಮಧ್ಯೆ ಗೃಹಮಂತ್ರಿಗಳ ಸರಳತೆ ಮೆಚ್ಚುವಂತದ್ದು…
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್