ಶಿವಮೊಗ್ಗ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 19 ವರ್ಷದೊಳಗಿನ ರಾಜ್ಯ ತಂಡಕ್ಕೆ ಶಿವಮೊಗ್ಗ ವಲಯದ ಮಿಥೇಶ್ ಕುಮಾರ್ ಹಾಗೂ 19 ವರ್ಷದೊಳಗಿನ ಮಹಿಳಾ ರಾಜ್ಯ ತಂಡಕ್ಕೆ ಶಿವಮೊಗ್ಗದ ನಿರ್ಮಿತ ಸಿ ಜೆ ಅವಕಾಶ ಪಡೆದಿದ್ದಾರೆ ಎಂದು ಕೆಎಸ್ಸಿಎ ಶಿವಮೊಗ್ಗ ವಲಯದ ಸಂಚಾಲಕರಾದ ಡಿ ಎಸ್ ಅರುಣ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಡಿ ಎಸ್ ಅರುಣ್ ಶಿವಮೊಗ್ಗ ವಲಯಕ್ಕೆ ಇದೊಂದು ಹೆಮ್ಮೆಯ ವಿಷಯ. ಹಲವು ವರ್ಷಗಳಿಂದ ಇದ್ದ ಕೊರಗು ಈ ವರ್ಷ ನೀಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಶಿವಮೊಗ್ಗಕ್ಕೆ ಸಾಕಷ್ಟು ಸೌಲಭ್ಯ ಒದಗಿಸಿಕೊಟ್ಟಿದೆ.
ಹಾಗಾಗಿ, ಈ ವರ್ಷ ಶಿವಮೊಗ್ಗ ವಲಯದಿಂದ 19 ವರ್ಷದೊಳಗಿನ ಮಹಿಳಾ ತಂಡಕ್ಕೆ ನಿರ್ಮಿತಿ ಹಾಗೂ 19 ವರ್ಷದೊಳಗಿನ ಯುವಕರ ತಂಡಕ್ಕೆ ಮಿಥೇಶ್ ಕುಮಾರ್ ಆಯ್ಕೆ ಆಗಿರುವುದು ಸಂತಸದ ಸಂಗತಿ.
ಸಾಕಷ್ಟು ಪ್ರರಿಶ್ರಮ ಪಟ್ಟು ಲೀಗ್ ಮ್ಯಾಚ್ ಸೇರಿ ಹಲವು ಪಂದ್ಯಗಳಲ್ಲಿ ಹೆಚ್ಚು ವಿಕೆಟ್ ಪಡೆಯುವ ಮೂಲಕ ಮಿಥೇಶ್ ಕುಮಾರ್ ರಾಜ್ಯ ತಂಡಕ್ಕೆ ಆಯ್ಕೆ ಆಗಿದ್ದಾರೆ. ಈ ಇಬ್ಬರು ಕ್ರೀಡಾಪಟುಗಳು ಆದಷ್ಟು ಬೇಗ ಭಾರತೀಯ ತಂಡ ಪ್ರತಿನಿಧಿಸುವಂತಾಗಲಿ. ಈ ಇಬ್ಬರ ಆಯ್ಕೆ ಶಿವಮೊಗ್ಗಕ್ಕೆ ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್