ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ.
ಘಟನೆಯ ಹಿನ್ನೆಲೆ :
ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ ಆರನೇ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಫ್ಎಸ್ಎಲ್ ಲ್ಯಾಬ್ಗೆ ದೇಹದ ಅಂಗಾಂಗಗಳನ್ನು ಕಳುಹಿಸಲಾಗಿತ್ತು. ಈಗ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವವರದ್ದು ಎಂದು ಪೊಲೀಸರು ವರದಿ ನೀಡಿದ್ದಾರೆ.
ಆದರೆ ಶಶಿ ಪೋಷಕರು ಮಾತ್ರ ಇದನ್ನು ತಳ್ಳಿ ಹಾಕಿದ್ದಾರೆ. ಡಿಎನ್ಎ ವರದಿ ಬಂದಿದೆ. ಆರನೇ ಮೃತದೇಹ ನಮ್ಮ ಮಗನದ್ದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಸ್ಫೋಟಗೊಂಡ ಬಳಿಕ ಶಶಿ ತನ್ನ ಸ್ನೇಹಿತರಿಗೆ ಮಾತನಾಡಿದ್ದಾನೆ. ಸತ್ತವನು ಹೇಗೆ ಮಾತನಾಡಲು ಸಾಧ್ಯ? ಎಂದು ಪೋಷಕರು ಪ್ರಶ್ನೆ ಮಾಡಿದ್ದಾರೆ.
ದೇಹದ ಪತ್ತೆಗೆ ನಮಗೆ ಕರೆಸಿದ್ದಾಗ ನಾನು ಮೃತದೇಹ ನಮ್ಮ ಮಗನದ್ದಲ್ಲ ಎಂದರೂ ಸಹ ಪೊಲೀಸರು ಒಪ್ಪದೆ, ನಮ್ಮದೇ ಎಂದು ವಾದಿಸಿದ್ದರು. ಇದೀಗ ಮತ್ತೆ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ನಮ್ಮ ಮಗನ ಬಳಿ ಎರಡು ಫೋನ್ ನಂಬರ್ ಇತ್ತು. ಈ ಫೋನ್ ನಂಬರ್ಗಳ ಇನ್ ಕಮಿಂಗ್ ಮತ್ತು ಔಟ್ ಗೋಯಿಂಗ್ ಎರಡನ್ನೂ ಪರಿಶೀಲಿಸಿದ್ರೆ ಮಾಹಿತಿ ಸಿಗುತ್ತದೆ. ಆದರೆ ಇದನ್ನು ಪೊಲೀಸರು ಮಾಡುತ್ತಿಲ್ಲ. ಬದುಕಿರುವ ನಮ್ಮ ಮಗನನ್ನು ಪೊಲೀಸರೇ ಸಾಯಿಸುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…