Categories: Blog

ಗಾಂಜಾ ಸೇವನೆ ಪತ್ತೆ ಹಚ್ಚಲು ಕಿಟ್‍ಗಳ ಮೂಲಕ ಪರೀಕ್ಷೆ : ಡಿಎಚ್ಒ ರಾಜೇಶ್ ಸುರಗೀಹಳ್ಳಿ

ಶಿವಮೊಗ್ಗ : ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಟಾ 2003 ಕಾಯಿದೆಯ ಪರಿಣಾಮಕಾರಿ ಅನುಷ್ಠಾನ ಕುರಿತು, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಗರದ ಐಎಂಎ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಎಚ್ಒ ರಾಜೇಶ್ ಸುರಗೀಹಳ್ಳಿ ಅವರು, ಜಿಲ್ಲೆಯಲ್ಲಿ ಗಾಂಜಾ ಸೇವನೆ ಅತಿ ಹೆಚ್ಚಿದೆ. ಆದರೆ ಈ ಸೇವನೆ ಕುರಿತು ದಾಖಲೆಗಳಿಲ್ಲದ ಕಾರಣ ಪ್ರಕರಣ ದಾಖಲಿಸುವುದು ಕಷ್ಟವಾಗಿದೆ. ಬೆಂಗಳೂರಿನಲ್ಲಿ ಗಾಂಜಾ ಸೇವನೆ ಪತ್ತೆ ಹಚ್ಚಲು ಕಿಟ್‍ಗಳ ಮೂಲಕ ಪರೀಕ್ಷೆ ಮಾಡುವ ಪ್ರಯೋಗ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿಯೂ ಈ ಗಾಂಜಾ ಸೇವನೆ ಪತ್ತೆ ಹಚ್ಚುವ ಕಿಟ್‍ಗಳನ್ನು ಉಪಯೋಗಿಸಿ ಗಾಂಜಾ ಪ್ರಕರಣಗಳನ್ನು ದಾಖಲಿಸಿ, ಗಾಂಜಾ ಸೇವನೆಗೆ ಕಡಿವಾಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್.ಎಸ್.ಎ ಮಾತನಾಡಿ ಮಕ್ಕಳು, ಯುವಜನತೆ ಸೇರಿದಂತೆ ಜನ ಸಮುದಾಯವನ್ನು ಮಾದಕ ದ್ರವ್ಯಗಳ ಬಳಕೆಯಿಂದ ದೂರವಿಡುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಕೋಟ್ಪಾ ಕಾಯ್ದೆ 2003 ಬಗ್ಗೆ ತಿಳಿದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್, ಪಾಲ್ಗೊಂಡಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಪ್ರತಿಮಾ ಪ್ರಾರ್ಥಿಸಿದರು. ಎನ್‍ಟಿಸಿಪಿ ಸಾಮಾಜಿಕ ಕಾರ್ಯಕರ್ತ ರವಿರಾಜ್ ನಿರೂಪಿಸಿದರು. ಎನ್.ಟಿ.ಪಿ.ಸಿ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಮಲ್ಲಪ್ಪ.ಓ, ಎನ್‍ಟಿಸಿಪಿ ಜಿಲ್ಲಾ ಸಲಹೆಗಾರ ಹೇಮಂತರಾಜ್ ಅರಸ್, ಐಪಿಹೆಚ್ ಯೋಜನಾಧಿಕಾರಿ ಅಚ್ಯುತ ಎನ್.ಜಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ತಂಬಾಕು ಬಳಕೆ ದುಷ್ಪರಿಣಾಮಗಳು ಮತ್ತು ಕೋಟ್ಪಾ ಕಾಯ್ದೆ 2003 ಕುರಿತು ಮಾಹಿತಿ ನೀಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

21 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago