Categories: Blog

ತೀರ್ಥಹಳ್ಳಿ : ಬರಹಗಾರ್ತಿ ಪದ್ಮಜಾ ಜೋಯ್ಸ್ ರವರ “ಕೃಷ್ಣತರಂಗಿಣಿ” ಕೃತಿ ಲೋಕಾರ್ಪಣೆ :

ತೀರ್ಥಹಳ್ಳಿ: ಲೇಖಕ ವಿಷಯವನ್ನು ಗ್ರಹಿಸಿ ತಪಸ್ಸಿನಂತೆ ಬರವಣಿಗೆ ಮಾಡಿದಾಗ ಮಾತ್ರ ಯಶಸ್ವಿಯಾಗುತ್ತಾನೆ.
ಸತ್ವಯುತ, ಶಕ್ತಿಯುತವಾದ ಕೃಷ್ಣ ತರಂಗಿಣಿ ಕೃತಿಯಿಂದ ಸಮಾಜ ಸದೃಢವಾಗಲಿ ಎಂದು ಅಖಿಲ ಭಾರತ ಸಾಹಿತ್ಯ ಪರಿಷತ್‌ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಅರೂರು ಅಭಿಪ್ರಾಯಪಟ್ಟರು.

ತೀರ್ಥಹಳ್ಳಿ ಪಟ್ಟಣದ ಲಯನ್ಸ್ ಭವನದಲ್ಲಿ
ಬೆಂಗಳೂರಿನ ಸ್ನೇಹ ಬುಕ್ ಹೌಸ್ ಪ್ರಸ್ತುತಪಡಿಸಿ ತೀರ್ಥಹಳ್ಳಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಬರಹಗಾರ್ತಿ ದರಲಗೋಡು ಪದ್ಮಜಾ ಜೋಯ್ಸ್ ರವರ ‘ಕೃಷ್ಣ ತರಂಗಿಣಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಶ್ರೇಷ್ಠ ಪರಂಪರೆ ನೀಡಿದ ದೇಶ ನಮ್ಮದು,ಸಾಹಿತಿಗಳು ದೇಶವನ್ನು ಗಟ್ಟಿಯಾಗಿ ಕಟ್ಟಲು ಕಾರಣಕರ್ತರಾಗುತ್ತಾರೆ. ತಪಸ್ಸಿನೊಂದಿಗೆ ಶಕ್ತಿ, ಆರಾಧನೆ ಮಾಡಿದ ಲೇಖಕಿ ಶ್ರೀ ಕೃಷ್ಣನ ವ್ಯಕ್ತಿತ್ವವನ್ನು ಈ ಕೃತಿಯಲ್ಲಿ ಅವಲೋಕಿಸಿದ್ದಾರೆ.ಕೃಷ್ಟ ತರಂಗಿಣಿ
ಕೃತಿ ಓದುಗರನ್ನು ಆಕರ್ಷಿಸಿ ಧೀರ್ಘಕಾಲ ಸಮಾಜದಲ್ಲಿ ಉಳಿಯುವಂತಹ, ಕೃಷ್ಣನ ಸಂದೇಶ ಸಾರುವ ಕೃತಿಯಾಗಲಿದೆ ಎಂದರು.

     ….. ಬರಹಗಾರ್ತಿ ಪದ್ಮಜಾ ಜೋಯ್ಸ್…..



ಶಿಕ್ಷಣ ತಜ್ಞ ಕೆ.ಎಂ.ಜಯಶೀಲ ಮಾತನಾಡಿ, ಸಾಹಿತಿಗಳಿಗೆ ಸಂವೇದನಾ ಶೀಲತೆ ಅತಿ ಮುಖ್ಯ, ಶ್ರೀಕೃಷ್ಣನ ವ್ಯಕ್ತಿತ್ವದ ಆಯಾಮಗಳನ್ನು ಹಲವು ಸಾಹಿತಿಗಳ, ಕವಿಗಳ ಕೃತಿಗಳು ಕನ್ನಡದಲ್ಲಿ ಮಹತ್ವವನ್ನು ಪಡೆದಿದೆ. ಕೃಷ್ಣನ ಚರಿತ್ರೆ ಸ್ಫೂರ್ತಿ ಕೊಡುವಂತದ್ದು. ಕುವೆಂಪು, ಪುತಿನ, ವಿಸೀ, ಮುನ್ನಿ
ಮುಂತಾದ ಮಹಾನ್ ಲೇಖಕರ ಕೃತಿಗಳಲ್ಲಿ ಕೃಷ್ಣನ ಬದುಕಿನ ಸ್ವಾರಸ್ಯವನ್ನು ನಾವು ಓದಿದ್ದೇವೆ. ಶ್ರೀಕೃಷ್ಟ ಪ್ರೀತಿಯ ಆರಾಧ್ಯ ಧೈವನಾಗಿದ್ದಾನೆ. ಕೃಷ್ಣನದು ಮಹಿಳಾ ಪರವಾದ ಸಂವೇದನಾಶೀಲ ವ್ಯಕ್ತಿತ್ವ ಹೆಣ್ಣಿಗೆ ಅನ್ಯಾಯವಾದಗಲೆಲ್ಲಾ ಮೆಟ್ಟಿನಿಂತು ತನ್ನ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಇಂದಿಗೂ ಗೌರವಯುತ ಸ್ಥಾನ ಪಡೆದ ಮಹಾನ್ ವ್ಯಕ್ತಿ ಎಂದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ ಸಮಾಜದ ಪರಿವರ್ತನೆ ಮಾಡುವ ಶಕ್ತಿ ಸಾಹಿತ್ಯಕ್ಕಿದೆ.ಯಾವುದೇ ಕೃತಿಗಳಾದರೂ ಸಾಹಿತ್ಯ ಕ್ಷೇತ್ರದಲ್ಲಿ ವಿಮರ್ಶೆ ಯಾಗಬೇಕು.ಕೃತಿಗೆ ಕೊಡುವ ಮಹತ್ವ ಕೃತಿಕಾರನಿಗೂ ಸಲ್ಲಬೇಕು ಎಂದರು.

ಲೇಖಕಿ ಪದ್ಮಜಾ ಜೋಯ್ಸ್ ಪುಸ್ತಕದ ರಚನೆಯ ಶ್ರಮದ ಬಗ್ಗೆ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ, ತೀರ್ಥಹಳ್ಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಿರಿಬೈಲು ಧರ್ಮೇಶ್ ವಹಿಸಿ ಮಾತನಾಡಿದರು.ಶ್ರವಣಬೆಳಗೊಳದ ಲೇಖಕಿ ವಸುಮತಿ ಜೈನ್ ಪ್ರಕಾಶಕರ ಪರವಾಗಿ ಮಾತನಾಡಿದರು. ದರಗೋಡು
ನಾಗೇಂದ್ರ ಜೋಯ್ಸ್ ನಿರೂಪಣೆ ಮಾಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago